ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವೈಯಕ್ತಿಕ ತೇಜೋವಧೆ ಸರಿಯಲ್ಲ, ಇದನ್ನು ಇಲ್ಲಿಗೇ ಬಿಡುವುದಿಲ್ಲ, ಗೆಟ್ ವೆಲ್ ಸೂನ್: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ

ತಮ್ಮ ಮೇಲೆ ಐಪಿಎಸ್ ಮಹಿಳಾ ಅಧಿಕಾರಿ ಡಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದಾರೆ.

ರೋಹಿಣಿ ಸಿಂಧೂರಿ(ಸಂಗ್ರಹ ಚಿತ್ರ)
Sumana Upadhyaya
Updated On : 20 Feb 2023, 8:14 pm

ಬೆಂಗಳೂರು: ತಮ್ಮ ಮೇಲೆ ಐಪಿಎಸ್ ಮಹಿಳಾ ಅಧಿಕಾರಿ ಡಿ ರೂಪಾ ಮೌದ್ಗಿಲ್ ಮಾಡಿರುವ ಆರೋಪಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ತಮ್ಮ ನಿವಾಸದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ, ಈ ರೀತಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಹಿಳಾ ಅಧಿಕಾರಿಯೊಬ್ಬರು ನನ್ನ ಮೇಲೆ ವೈಯಕ್ತಿಕವಾಗಿ ಕೀಳು ಮಟ್ಟದಲ್ಲಿ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ ಬಿಡಿ, ಹೆಚ್ಚಿಗೆ ಮಾತನಾಡುವುದಿಲ್ಲ, ಬೇಡ, ಗೆಟ್ ವೆಲ್ ಸೂನ್ ಎಂದರು.

ಮಾತನಾಡಲು ಇದು ವೇದಿಕೆಯಲ್ಲ, ಸರಿಯಾದ ಜಾಗವಲ್ಲ, ಸರ್ಕಾರದ ಮಟ್ಟದಲ್ಲಿ ಇದನ್ನು ಗಮನಕ್ಕೆ ತರಬೇಕು, ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ, ಗೆಟ್ ವೆಲ್ ಸೂನ್ ಎಂದಷ್ಟೇ ನಾನು ಹೇಳಬಲ್ಲೆ ಎಂದರು.

Advertisement

Advertisement

ಇದನ್ನೂ ಓದಿ: ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳು ವೈರಲ್: ಹಲವರಿಂದ ಆಕ್ರೋಶ; ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಸ್ಪಷ್ಟನೆ

ಇದನ್ನು ಇಲ್ಲಿಗೇ ಬಿಡುವ ಪ್ರಶ್ನೆಯಿಲ್ಲ, ಅವರು ತಮ್ಮ ವರ್ತನೆಯನ್ನು ಮುಂದುವರಿಸಿದರೆ ಖಂಡಿತಾ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ, ವೃತ್ತಿಪರವಾಗಿ ಏನು ಬೇಕಾದರೂ ಮಾತನಾಡಲಿ, ವೈಯಕ್ತಿಕ ವಿಷಯದಲ್ಲಿ ಮಾತನಾಡಿದರೆ ನಾನು ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ನನ್ನ ಪತಿ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹೇಳುತ್ತಿರುವುದೂ ಅದನ್ನೇ, ಮುಂದೆ ಏನು ಮಾಡಬೇಕೋ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments