ರಾಜ್ಯ

248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.8691 ಕೋಟಿ ಮೊತ್ತದ ಯೋಜನೆ- ಎಂಟಿಬಿ ನಾಗರಾಜ್

Nagaraja AB

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ  ಸೂಚಿಸಿದರು.

ವಿಕಾಸಸೌಧದಲ್ಲಿ ಇಂದು ಅಮೃತ್-2.0 ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ 287 ಸ್ಥಳೀಯ ಸಂಸ್ಥೆಗಳಿದ್ದು, ಅವುಗಳಲ್ಲಿ 248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ಅಮೃತ್-2.0 ಯೋಜನೆ ಅಡಿ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

 ಅಮೃತ್-2.0 ಯೋಜನೆ  9230 ಕೋಟಿ ರೂ.ಗಳದಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ ರೂ. 4, 615 ಕೋಟಿ ರೂ.ನೆರವು ನೀಡಲಿದ್ದು,ರಾಜ್ಯ ಸರ್ಕಾರದ ಪಾಲು 3, 692 ಕೋಟಿ ರೂ.,ಉಳಿದ 927 ಕೋಟಿ ರೂ.ಗಳನ್ನು ಸ್ಥಳೀಯ ಸಂಸ್ಥೆಗಳು ಭರಿಸಬೇಕಾಗುತ್ತದೆ ಎಂದರು. 

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್,ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್,ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಮೋಹನ್ ರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

SCROLL FOR NEXT