ರಾಜ್ಯ

ಚಿಕ್ಕಮಗಳೂರು: ಎಲ್ಲಾ ಬಿಕ್ಕಟಿನ ಸಂದರ್ಭಗಳಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ- ಜೆ.ಪಿ.ನಡ್ಡಾ

Nagaraja AB

ಕೊಪ್ಪ: ಕೇಂದ್ರ ಸರ್ಕಾರ ಎಲ್ಲಾ ಬಿಕ್ಕಟ್ಟಿನಿಂದ ಅಡಿಕೆ ಬೆಳೆಗಾರರನ್ನು ರಕ್ಷಣೆ ಮಾಡಿರುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದ ಅಡಿಕೆ ಬೆಳೆಗಾರರ  ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದ್ದು, ಮೂರು ಬಾರಿ ಅಡಿಕೆ ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸಲಾಗಿದೆ ಎಂದರು. 

ಅಸ್ಥಿರಗೊಳಿಸುವ ಬೆಲೆಗಳು ಮತ್ತು ಕಳಪೆ ಗುಣಮಟ್ಟದ ಉತ್ಪನ್ನ ದೇಶೀಯ ಮಾರುಕಟ್ಟೆಗೆ ಪ್ರವೇಶಿಸುವುದನ್ನು ತಡೆಯಲು ನಾವು ಪ್ರಯತ್ನಿಸಿದ್ದೇವೆ. ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗದಿರಲಿ ಎಂದು  ಸರ್ಕಾರ ಪ್ರತಿ ನಿತ್ಯ ಪರಿಗಣಿಸಿದ್ದು, ಎಲ್ಲಾ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಅವರ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಡಬಲ್ ಎಂಜಿನ್ ಸರ್ಕಾರ ರೈತರು, ಮಹಿಳೆಯರು, ಬಡವರು, ದಲಿತರು, ಯುವಕರು ಸೇರಿದಂತೆ ಸಮಾಜದ ಎಲ್ಲ ವರ್ಗದವರನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಸಬಲೀಕರಣದತ್ತ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಜೆಪಿ ನಡ್ಡಾ ತಿಳಿಸಿದರು. 

SCROLL FOR NEXT