ಮುನಿರತ್ನ. 
ರಾಜ್ಯ

ಮಲ್ಲತ್ತಹಳ್ಳಿ ಕೆರೆಯಲ್ಲಿ ಶಿವನ ಪ್ರತಿಮೆ: ಸಚಿವ ಮುನಿರತ್ನ, ಅಧಿಕಾರಿಗಳಿಗೆ ಹೈಕೋರ್ಟ್‌ ನೋಟಿಸ್‌

ನಗರದ ಮಲ್ಲತ್ತಹಳ್ಳಿಯ ಕೆರೆಯ ದಂಡೆಯ ಮೇಲೆ 35 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ತೋಟಗಾರಿಕಾ ಸಚಿವ ವಿ ಮುನಿರತ್ನ ಸೇರಿದಂತೆ 8 ಮಂದಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

ಬೆಂಗಳೂರು: ನಗರದ ಮಲ್ಲತ್ತಹಳ್ಳಿಯ ಕೆರೆಯ ದಂಡೆಯ ಮೇಲೆ 35 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ತೋಟಗಾರಿಕಾ ಸಚಿವ ವಿ ಮುನಿರತ್ನ ಸೇರಿದಂತೆ 8 ಮಂದಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.

ಕೆರೆಗಳ ಒತ್ತುವರಿಗೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಭಾಗವಾಗಿ ವಕೀಲ ಗೀತಾ ಮಿಶ್ರಾ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ರಾಜರಾಜೇಶ್ವರಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಎಂ ಗೋವಿಂದರಾಜು, ಬಿಬಿಎಂಪಿ ಜಂಟಿ ಆಯುಕ್ತ, ಎಂಜಿನಿಯರ್‌ಗಳಾದ ಗೀತಾ, ಬಸವರಾಜ್‌, ಶಿಲ್ಪಾ, ರಾಜ್ಯ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ ಮೃತ್ಯುಂಜಯ ಸ್ವಾಮಿ,, ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಬಸವರಾಜ್‌ ಆರ್‌ ಕಬಾಡೆ ಮತ್ತು ತೋಟಗಾರಿಕಾ ಸಚಿವ ಮುನಿರತ್ನಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಮಹಾ ಶಿವರಾತ್ರಿಯ ಭಾಗವಾಗಿ ಫೆಬ್ರವರಿ 18ರಂದು ಶಿವನ ಮೂರ್ತಿ ಪ್ರತಿಷ್ಠಾಪಿಸಲು ಅಧಿಕಾರಿಗಳು ಅನುಮತಿಸಿದ್ದಾರೆ. ಪಕ್ಕದಲ್ಲಿ ಬಯಲು ರಂಗಸ್ಥಳ ನಿರ್ಮಿಸಲು ಮತ್ತು ಮನರಂಜನಾ ಚಟುವಟಿಕೆ ನಡೆಸಲು ಅನುಮತಿಸಲಾಗಿದೆ. ಹೈಕೋರ್ಟ್‌ ಆದೇಶದ ಅನ್ವಯ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್‌ ಸಂಶೋಧನಾ ಸಂಸ್ಥೆಯು (ನೀರಿ) ಮಲ್ಲತ್ತಹಳ್ಳಿ ಕೆರೆ ಸಮೀಕ್ಷೆ ನಡೆಸಿದ್ದು, ಕೆರೆಯು 73 ಎಕರೆಯಲ್ಲಿ ಹರಡಿಕೊಂಡಿದ್ದು, ಇದರಲ್ಲಿ 4.7 ಎಕರೆ ಒತ್ತುವರಿಯಾಗಿದೆ. ಅಕ್ರಮವಾಗಿ ಬಯಲು ರಂಗಸ್ಥಳ ನಿರ್ಮಿಸುವುದು ಮತ್ತು ಕಸ ಶೇಖರಣೆಯಿಂದಾಗಿ ಆ ಪ್ರದೇಶವು ಮತ್ತಷ್ಟು ಕಡಿಮೆಯಾಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!