ಶಿವಮೊಗ್ಗ ವಿಮಾನ ನಿಲ್ದಾಣ 
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಸಂಪುಟ ನಿರ್ಧಾರ, ಕೇಂದ್ರಕ್ಕೆ ಶಿಫಾರಸು

ಮಲೆನಾಡು ಜನತೆಯ ಬಹುವರ್ಷಗಳ ಕನಸು ಶಿವಮೊಗ್ಗ ವಿಮಾನ ನಿಲ್ದಾಣ ಕೊನೆಗೂ ಸೇವೆಗೆ ಸಿದ್ಧವಾಗಿದ್ದು, ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ ಕುರಿತು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು: ಮಲೆನಾಡು ಜನತೆಯ ಬಹುವರ್ಷಗಳ ಕನಸು ಶಿವಮೊಗ್ಗ ವಿಮಾನ ನಿಲ್ದಾಣ ಕೊನೆಗೂ ಸೇವೆಗೆ ಸಿದ್ಧವಾಗಿದ್ದು, ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ ಕುರಿತು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಹೌದು.. ಶಿವಮೊಗ್ಗದಲ್ಲಿ ಕೊನೆಗೂ ವಿಮಾನ ಹಾರಾಟಕ್ಕೆ ದಿನಾಂಕ ಫಿಕ್ಸ್ ಆಗಿದ್ದು, ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಶಿವಮೊಗ್ಗ ವಿಮಾನ ನಿಲ್ದಾಣದ (Shimoga Airport)  ಉದ್ಘಾಟನೆ ಮಾಡಲಿದ್ದಾರೆ.

ಅಂತೆಯೇ ನಿಲ್ದಾಣಕ್ಕೆ ಹೆಸರಿಡುವ ಕುರಿತು ಎದ್ದಿದ್ದ ಗೊಂದಲ ಕೂಡ ಪರಿಹಾರವಾಗಿದ್ದು, ರಾಷ್ಟ್ರಕವಿ ಕುವೆಂಪು ಹೆಸರಿಡಲು ಖುದ್ದು ಸಿಎಂ ಬೊಮ್ಮಾಯಿ(Basavaraj Bommai) ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಒಪ್ಪಿಗೆ ಪಡೆದಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.

ಬಿಎಸ್ ಯಡಿಯೂರಪ್ಪ ಮೊದಲ ಬಾರಿಗೆ ಸಿಎಂ ಆದಾಗ ಶಿವಮೊಗ್ಗ ತಾಲೂಕಿನ ಸೋಗಾನೆಯಲ್ಲಿ ಏರ್ ಪೋರ್ಟ್ ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ಏರ್ ಪೋರ್ಟ್ ಕಾಮಗಾರಿಯು ಸ್ಥಗಿತಗೊಂಡಿತ್ತು. ಮತ್ತೆ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ನೆನಗುದಿಗೆ ಬಿದ್ದಿದ್ದ ಏರ್ ಪೋರ್ಟ್ ಕಾಮಗಾರಿಗೆ ಮರುಚಾಲನೆ ಕೊಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT