ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮೈಸೂರು: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್ ಆತ್ಮಹತ್ಯೆಗೆ ಶರಣು

ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ (Lady Constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಸಾಂದರ್ಭಿಕ ಚಿತ್ರ
Sumana Upadhyaya
Updated On : 22 Feb 2023, 10:32 am

ಮೈಸೂರು: ಮಹಿಳಾ ಪೊಲೀಸ್​ ಕಾನ್ಸ್​​ಟೇಬಲ್​ (Lady Constable) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್​ಆರ್​​ಪಿ ವಸತಿಗೃಹದ ಮನೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಮೃತಪಟ್ಟವರನ್ನು ಲೇಡಿ ಕಾನ್ಸ್ಟೇಬಲ್ 32 ವರ್ಷದ ಗೀತಾ ಎಂದು ಗುರುತಿಸಲಾಗಿದೆ. 

ಗೀತಾ, ನಜರಬಾದ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸಟೇಬಲ್ ಆಗಿದ್ದರು. ಮೊನ್ನೆ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು, ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದರು. ಪತಿ ಹೋಗಿ ಪತ್ನಿ ಗೀತಾಗೆ ಫೋನ್ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement