ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧ; ಇಬ್ಬರು ಪುತ್ರಿಯರಿಗೆ, ಪತ್ನಿಗೆ ಬೆಂಕಿ ಹಚ್ಚಿ ಕೊಂದ ತಂದೆ

ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ: ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತ ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು 37 ವರ್ಷದ ನೇತ್ರಾವತಿ, ಮಕ್ಕಳಾದ 12 ವರ್ಷದ ವರ್ಷಿತಾ ಮತ್ತು 9 ವರ್ಷದ ಸ್ನೇಹಾ ಎಂದು ಗುರುತಿಸಲಾಗಿದೆ. ಇನ್ನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ 48 ವರ್ಷದ ಸೊನ್ನೇಗೌಡ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ.

ಸೊನ್ನೇಗೌಡನ ಮನೆಯಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಮೃತಪಟ್ಟಿದ್ದಾರೆ. ವಿಷ ಸೇವಿಸಿ ಅಶ್ವಸ್ಥನಾಗಿದ್ದ ಸೊನ್ನೇಗೌಡನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್ ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

SCROLL FOR NEXT