ಬಿಎಂಎಸ್ ಟ್ರಸ್ಟ್ ಕುಟುಂಬಸ್ಥರೊಂದಿಗೆ ಬಿಜೆಪಿ ನಾಯಕರು 
ರಾಜ್ಯ

ಬಿಎಂಎಸ್ ಟ್ರಸ್ಟ್ ನಲ್ಲಿ 10 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಪ್ರಧಾನಿಗೆ ಹೆಚ್ ಡಿ ಕುಮಾರಸ್ವಾಮಿ ಪತ್ರ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಲವು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೊಸ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಲವು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೊಸ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ.

ಅದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಬಿಎಂಎಸ್‌ ಎಜುಕೇಷನ್‌ ಟ್ರಸ್ಟ್‌ ನ್ನು ಅಕ್ರಮವಾಗಿ ಖಾಸಗಿ ಟ್ರಸ್ಟ್‌ ಆಗಿ ಮಾರ್ಪಡಿಸಲು ಸಚಿವ ಅಶ್ವತ್ಥ ನಾರಾಯಣ ಸಹಕರಿಸಿದ್ದಾರೆ ಎಂದು ಅಶ್ವಥ್ ನಾರಾಯಣ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ನಾಯಕ ಬಿ ಎಲ್ ಸಂತೋಷ್ ಮೊದಲಾದವರು ಟ್ರಸ್ಟ್ ನ ಮುಖ್ಯಸ್ಥರು ಮತ್ತು ಅವರ ಕುಟುಂಬಸ್ಥರೊಂದಿಗೆ ಉಪಹಾರ ಸೇವಿಸುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ವಿವರವಾಗಿ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಈ ಹಿಂದೆ ನಡೆದ ಸದನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಆರೋಪ ಮಾಡಿದ್ದರು. ಸದನದಲ್ಲಿ ಧರಣಿಗೆ ಸಹ ಮುಂದಾಗಿದ್ದರು. ಆದರೆ, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಈ ಆರೋಪವನ್ನು ಸಚಿವರು ತಳ್ಳಿ ಹಾಕಿದ್ದರು. ಇದಾದ ಬಳಿಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಿಎಂಎಸ್ ಟ್ರಸ್ಟ್ ಮುಖ್ಯಸ್ಥ ರೊಂದಿಗೆ ಅಶ್ವಥ್ ನಾರಾಯಣ್ ಊಟ ಮಾಡುತ್ತಿರುವ ಫೋಟೋ ಹಾಕಿ ಆರೋಪ ಮುಂದುವರಿಸಿದ್ದಾರೆ. 

ಇದೀಗ ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಎಂಎಸ್ ಟ್ರಸ್ಟ್ ಮುಖ್ಯಸ್ಥ ರೊಂದಿಗೆ ಮನೆ ಭೇಟಿ ನೀಡಿದ ಸಂದರ್ಭದ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ. 

BMS ಟ್ರಸ್ಟ್ ನಲ್ಲಿ ನಡೆದಿರುವ ಗೋಲ್ ಮಾಲ್ ಬಗ್ಗೆ 2022ರ ಸೆಪ್ಟೆಂಬರ್ 22, 23ರಂದು ವಿಧಾನಸಭಾ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಮಾತನಾಡಿ, ತನಿಖೆಗೆ ಆಗ್ರಹಿಸಿದ್ದರು. ಬಿಎಂಎಸ್ ಶೈಕ್ಷಣಿಕ ಟ್ರಸ್ಟ್ ನಲ್ಲಿ 10 ಸಾವಿರ ಕೋಟಿ ರೂಪಾಯಿ ವಂಚನೆ ಹಾಗೂ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಸುಧೀರ್ಘವಾದ ಪತ್ರ ಬರೆದಿದ್ದು, ನ್ಯಾಯಾಂಗ ತನಿಖೆಗೆ ಇದೀಗ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT