ಪೊಲೀಸ್ ಆಯುಕ್ತ ಶಶಿಕುಮಾರ್ 
ರಾಜ್ಯ

ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಬೆಂಗಳೂರು ದಕ್ಷಿಣ(ಸಂಚಾರ) ವಿಭಾಗದ ಡಿಸಿಪಿಯಾಗಿ ಮೊಹಮ್ಮದ್ ಸುಜೀತ, ಬೆಂಗಳೂರು ನಗರ ಸಿಎಆರ್​ನ ಡಿಸಿಪಿಯಾಗಿ ಅರುಣಾಂಗ್ಷು ಗಿರಿ ಅವರನ್ನು ನೇಮಕ ಮಾಡಲಾಗಿದೆ. 

ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡೆಕ್ಕ ಕಿಶೋರ್ ಬಾಬು ಅವರನ್ನು ಹಾಗೂ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ(ಎಸ್​ಪಿ)ಯಾಗಿ ಯಶೋಧಾ ವಂಟಗೋಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಇನ್ನು, ಕೆಎಸ್ಆರ್ ಪಿ 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿರುವ ಡಾ.ಕೋನ ವಂಶಿಕೃಷ್ಣ ಅವರಿಗೆ ವೈರ್​ಲೆಸ್​ ಎಸ್​ಪಿ ಹುದ್ದೆ ಹೆಚ್ಚುವರಿ ಹೊಣೆಯಾಗಿ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video