ಸಾಂದರ್ಭಿಕ ಚಿತ್ರ 
ರಾಜ್ಯ

ಹಿಂಬಾಲಿಸಿಕೊಂಡು ಬಂದು ಯುವತಿಗೆ ಕಿರುಕುಳ: ತಮಿಳುನಾಡು ಮೂಲದ ಯುವಕನ ಬಂಧನ

ಹಿಂಬಾಲಿಸಿಕೊಂಡು ಬಂದು ಪದೇ ಪದೇ ಯುವತಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ತಮಿಳುನಾಡು ಮೂಲದ ಯುವಕನೊಬ್ಬನನ್ನು ಜೆಪಿ ನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಹಿಂಬಾಲಿಸಿಕೊಂಡು ಬಂದು ಪದೇ ಪದೇ ಯುವತಿಯೊಬ್ಬಳಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ತಮಿಳುನಾಡು ಮೂಲದ ಯುವಕನೊಬ್ಬನನ್ನು ಜೆಪಿ ನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಆರ್.ಮರಿಯಪ್ಪನ್ (22) ಬಂಧಿತ ಯುವಕನಾಗಿದ್ದಾನೆ. ಈತ ತಮಿಳುನಾಡಿನ ತಿರುನೆಲ್ವೇಲಿ ಮೂಲದವನಾಗಿದ್ದಾನೆಂದು ತಿಳಿದುಬಂದಿದೆ.

ಇಸ್ರೋದಲ್ಲಿ ದಲ್ಲಿ ಕೆಲಸ ಮಾಡುತ್ತಿರುವ 27 ವರ್ಷದ ಯುವತಿ ಮುರುಗೇಶಪಾಳ್ಯ ನಿವಾಸಿಯಾಗಿದ್ದು, ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಯುವಕನನ್ನು ಬಂಧನಕ್ಕೊಳಪಡಿಸಿದ್ದಾರೆ.

ಮರಿಯಪ್ಪನ್ ಕೂಡ ಈ ಹಿಂದೆ ಇಸ್ರೋದಲ್ಲಿಯೇ ಕೆಲಸ ಮಾಡುತ್ತಿದ್ದ. ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಯುವತಿ ನೀಡಿದ ದೂರಿನ ಅನ್ವಯ ಅಧಿಕಾರಿಗಳು ಯುವಕನನ್ನು ಕೆಲಸದಿಂದ ವಜಾಗೊಳಿಸಿದ್ದರು. ಆದರೂ, ಮರಿಯಪ್ಪನ್ ಯುವತಿಯ ಹಿಂಬಾಲಿಸುವುದನ್ನು ಬಿಟ್ಟಿಲ್ಲ. ಯುವತಿಗೆ ಪದೇ ಪದೇ ಮಸೇಜ್ ಹಾಗೂ ದೂರವಾಣಿ ಕರೆ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರೊಫೈಲ್ ಗಳ ಸೃಷ್ಟಿಸಿ ಕಿರುಕುಳ ನೀಡಲು ಆರಂಭಿಸಿದ್ದ,

1 ವರ್ಷಗಳ ಕಾಲ ಕಿರುಕುಳವನ್ನು ಅನುಭವಿಸಿದ್ದ ಯುವತಿ, 2022ರ ನವೆಂಬರ್ 21ರಂದು ಮೊದಲ ಬಾರಿಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ಮರಿಯಪ್ಪನ್ ನನ್ನು ಬಂಧನಕ್ಕೊಳಪಡಿಸಿದ್ದರು. ನಂತರ ಜಾಮೀನು ಮೇಲೆ ಯುವಕ ಹೊರಬಂದಿದ್ದಾನೆ. ಇದಾದ ಬಳಿಕವೂ ಮರಿಯಪ್ಪನ್ ಯುವತಿಗೆ ಕಿರುಕುಳ ನೀಡುವುದನ್ನು ಬಿಟ್ಟಿಲ್ಲ. ತನ್ನನ್ನು ಮದುವೆಯಾಗುವಂತೆ ಪೀಡಿಸಲು ಆರಂಭಿಸಿದ್ದಾನೆ.

ಇದರಿಂದ ಬೇಸತ್ತ ಯುವತಿ ಫೆಬ್ರವರಿ 10ರಂದು ಮತ್ತೆ ಠಾಣೆ ಮೆಟ್ಟಿಲೇರಿ ಎರಡನೇ ಬಾರಿಗೆ ದೂರು ನೀಡಿದ್ದಾಳೆ. ದೂರು ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

ಇದೀಗ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354 ಡಿ,ಐಪಿಸಿ ಸೆಕ್ಷನ್ 509 ಮತ್ತು ಐಪಿಸಿ ಸೆಕ್ಷನ್ 341 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!