ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರು 
ರಾಜ್ಯ

ಬೆಂಗಳೂರು: ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ  ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ  ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ  ಸುಮಾರು 63.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಸುಸಜ್ಜಿತ ನಿಲ್ದಾಣವನ್ನು ಮುಖ್ಯಮಂತ್ರಿ ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು. ಸಚಿವರಾದ ಆರ್. ಅಶೋಕ್, ಮುನಿರತ್ನ, ಬೈರತಿ ಬಸವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಎಂಟಿಸಿ ನಗರದ ಜನರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಬಿಎಂಟಿಸಿ ಪ್ರಮುಖ ಪಾತ್ರ ವಹಿಸಲಿದ್ದು, ಬೆಂಗಳೂರಿನ ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದರು. 

ಕೋವಿಡ್ ನಿಂದಾಗಿ ಹಾಗೂ ಕೆಲವು ವರ್ಷಗಳಿಂದ ಬಿಎಂಟಿಸಿ ದರಗಳನ್ನು ಹೆಚ್ಚಿಸದ ಕಾರಣ, ಬಿಎಂಟಿಸಿ ನಷ್ಟದಲ್ಲಿದೆ. ಕಳೆದ ಎರಡು ವರ್ಷಗಳಲ್ಲಿ ಸರ್ಕಾರ 2, 915 ಕೋಟಿ ರೂ.ಗಳನ್ನು ಸಂಸ್ಥೆಗೆ ನೀಡಿರುವುದರಿಂದ ಬಿಎಂಟಿಸಿ ಸಂಸ್ಥೆಗೆ ತನ್ನ ಸೇವೆಯನ್ನು ಸಲ್ಲಿಸಲು ಸಾಧ್ಯವಾಗಿದೆ. ಬಿಎಂಟಿಸಿಗೆ 3445 ಹೊಸ ಬಸ್ ಗಳನ್ನು ಒದಗಿಸಲಾಗುತ್ತಿದೆ ಎಂದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) ಕೇಂದ್ರ ಸರ್ಕಾರದ ಸಹಯೋಗದಲ್ಲಿ 1,300 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲಾಗುವುದು. ಪರಿಸರ ನಾಶ ತಡೆಯಲು ಈ ಬಸ್‌ಗಳ ಅಗತ್ಯವಿದೆ ಎಂದು ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT