ಸಾಂದರ್ಭಿಕ ಚಿತ್ರ 
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಪ್ರಕರಣ: ತನಿಖೆಯಲ್ಲಿ ಆಘಾತಕಾರಿ ವಿಚಾರ; ಫುಡ್ ಡೆಲಿವರಿ ಮೂಲಕ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ

ಕರಾವಳಿ ಕರ್ನಾಟಕದ ವೈದ್ಯಕೀಯ, ಇತರ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಒಳಗೊಂಡಿರುವ ಡ್ರಗ್ಸ್ ಪ್ರಕರಣದ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆನ್‌ಲೈನ್ ಫುಡ್ ಡೆಲಿವರಿಗಳ ಮೂಲಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಈ ಪದಾರ್ಥಗಳು ಪ್ರವೇಶಿಸಿವೆ ಮತ್ತು ವಾಚ್ ವಿವರಣೆ ಟ್ಯಾಗ್‌ಗಳ ರೂಪದಲ್ಲಿ ಎಲ್‌ಎಸ್‌ಡಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಉಡುಪಿ: ಕರಾವಳಿ ಕರ್ನಾಟಕದ ವೈದ್ಯಕೀಯ, ಇತರ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಒಳಗೊಂಡಿರುವ ಡ್ರಗ್ಸ್ ಪ್ರಕರಣದ ತನಿಖೆಯು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದೆ. ಆನ್‌ಲೈನ್ ಫುಡ್ ಡೆಲಿವರಿಗಳ ಮೂಲಕ ವಿದ್ಯಾರ್ಥಿಗಳ ಕೊಠಡಿಗಳಿಗೆ ಈ ಪದಾರ್ಥಗಳು ಪ್ರವೇಶಿಸಿವೆ ಮತ್ತು ವಾಚ್ ವಿವರಣೆ ಟ್ಯಾಗ್‌ಗಳ ರೂಪದಲ್ಲಿ ಎಲ್‌ಎಸ್‌ಡಿಯನ್ನು ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕರಾವಳಿ ಪ್ರದೇಶದಲ್ಲಿ ಡ್ರಗ್ಸ್ ಹಾವಳಿಗೆ ಕಡಿವಾಣ ಹಾಕುತ್ತಿರುವ ಕರ್ನಾಟಕ ಪೊಲೀಸ್ ಇಲಾಖೆ, ಜನವರಿಯಲ್ಲಿ ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರನ್ನು ಒಳಗೊಂಡ ದಂಧೆಯನ್ನು ಪತ್ತೆ ಮಾಡಿತ್ತು. ಈ ಪ್ರಕರಣದಲ್ಲಿ ಒಟ್ಟು 24 ಮಂದಿಯನ್ನು ಬಂಧಿಸಲಾಗಿದ್ದು, 22 ಮಂದಿ ವೈದ್ಯಕೀಯ ಕ್ಷೇತ್ರದವರೇ ಆಗಿದ್ದಾರೆ.

ಮಹಿಳೆಯರು ಸೇರಿದಂತೆ ಉತ್ತರ ಪ್ರದೇಶ, ಕರ್ನಾಟಕ, ಕೇರಳ, ತೆಲಂಗಾಣ ಮತ್ತು ದೆಹಲಿಯ 20 ಮತ್ತು 30 ರ ಹರೆಯದ ವೈದ್ಯರನ್ನು ಬಂಧಿಸಲಾಗಿದೆ. ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಮಾದಕ ದ್ರವ್ಯ ದಂಧೆ ಮತ್ತು ಸೇವನೆ ಆರೋಪದ ಮೇಲೆ ಇಬ್ಬರು ವೈದ್ಯರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಅಂತೆಯೇ, ಶಿಕ್ಷಣ ಕೇಂದ್ರವೆಂದೇ ಹೆಸರಾಗಿರುವ ನೆರೆಯ ಉಡುಪಿ ಜಿಲ್ಲೆಯಲ್ಲಿ ಕೂಡ ಡ್ರಗ್ಸ್ ಮಾಫಿಯಾದ ಬೇರುಗಳ ಮೇಲೆ ಪೊಲೀಸರು ಚಾಟಿ ಬೀಸಿದ್ದಾರೆ. ಮಾದಕ ದ್ರವ್ಯ ಮತ್ತು ಮಾದಕ ವ್ಯಸನದಲ್ಲಿ ತೊಡಗಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಂಸ್ಥೆಗಳಿಗೆ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹಾಕೇ ಅಕ್ಷಯ್ ಮಚ್ಚಿಂದ್ರ ಸೂಚಿಸಿದ್ದಾರೆ.

ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ಉಡುಪಿ ಜಿಲ್ಲೆಯ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಅವಧಿಗೆ ಅಮಾನತುಗೊಳಿಸಿದೆ.

ಹಲವು ವಿದ್ಯಾರ್ಥಿಗಳು ಡ್ರಗ್ ಪೆಡ್ಲರ್‌ಗಳಾಗಿ ಬದಲಾಗಿದ್ದು, ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ವಿವರಿಸಿವೆ. ವಿದ್ಯಾರ್ಥಿಗಳು ಎಂಡಿಎಂಎ, ಎಲ್‌ಎಸ್‌ಡಿ ಮತ್ತು ಗಾಂಜಾ ಸೇವಿಸಿದ್ದಾರೆ. ಮೆಡಿಕಲ್, ಮ್ಯಾನೇಜ್‌ಮೆಂಟ್, ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕೊಠಡಿಗಳಿಗೆ ಡ್ರಗ್ಸ್ ಪೂರೈಕೆಯಾಗುತ್ತಿತ್ತು.

ವಿದ್ಯಾರ್ಥಿಗಳು ಆನ್‌ಲೈನ್ ಫುಡ್ ಅಗ್ರಿಗೇಟರ್‌ಗಳಿಂದ ಆಹಾರವನ್ನು ಆರ್ಡರ್ ಮಾಡುತ್ತಿದ್ದರು ಮತ್ತು ತಡರಾತ್ರಿ ಆಹಾರ ಪೊಟ್ಟಣಗಳಲ್ಲಿ ಮಾದಕ ವಸ್ತುಗಳು ಬರುತ್ತಿದ್ದವು. ಡೆಲಿವರಿ ಬಾಯ್‌ನನ್ನು ಬಂಧಿಸಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲ್ಎಸ್‌ಡಿಯನ್ನು ವಾಚ್ ವಿವರಣೆ ಟ್ಯಾಗ್‌ಗಳ ರೂಪದಲ್ಲಿ ಕಳುಹಿಸಲಾಗಿದೆ. ವಾಚ್ ಆರ್ಡರ್ ಮಾಡುವ ನೆಪದಲ್ಲಿ ವಿದ್ಯಾರ್ಥಿಗಳು ಇವುಗಳನ್ನು ಪಡೆಯುತ್ತಿದ್ದರು ಎಂದು ಮೂಲಗಳು ವಿವರಿಸಿವೆ.

ಉಡುಪಿಯ ವಿದ್ಯಾರ್ಥಿಗಳ ಹಾಸ್ಟೆಲ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡಗಳು ಕೊಠಡಿಗಳು ಮತ್ತು ಹಾಸ್ಟೆಲ್ ಆವರಣದಲ್ಲಿ ಕಾಂಡೋಮ್‌ಗಳ ರಾಶಿಯನ್ನು ಕಂಡು ಬೆಚ್ಚಿಬಿದ್ದಿವೆ. ಹುಡುಗರು ಮತ್ತು ಹುಡುಗಿಯರು ಒಟ್ಟಿಗೆ ಮಾದಕ ದ್ರವ್ಯ ಸೇವಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಮ್ಮ ಪ್ರೇಯಸಿಗೆ ಡ್ರಗ್ಸ್ ಕೊಡುವುದು ಸಾಮಾನ್ಯವಾಗಿಬಿಟ್ಟಿತ್ತು.

ಮಂಗಳೂರು, ಕೇರಳ ಮತ್ತು ಗೋವಾದಿಂದ ಉಡುಪಿ ಮತ್ತು ಮಣಿಪಾಲಕ್ಕೆ ಮಾದಕ ವಸ್ತು ಪೂರೈಕೆಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಡ್ರಗ್ಸ್ ಮಾಫಿಯಾ ವಿದ್ಯಾರ್ಥಿ ಸಮುದಾಯದ ನಡುವೆಯೇ ಡ್ರಗ್ ದಂಧೆಕೋರರ ಜಾಲವನ್ನು ಸ್ಥಾಪಿಸಿತ್ತು. ವಾರಾಂತ್ಯದ ಪ್ರವಾಸದ ನೆಪದಲ್ಲಿ ಹಲವರು ಗೋವಾಕ್ಕೆ ತೆರಳಿ ತಮ್ಮ ಹಾಸ್ಟೆಲ್‌ಗಳಿಗೆ ಡ್ರಗ್ಸ್ ತಂದಿದ್ದರು.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿದ್ಯಾರ್ಥಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಈ ಹಾವಳಿಯನ್ನು ಕೊನೆಗೊಳಿಸಲು ಪೊಲೀಸ್ ಇಲಾಖೆಯು ಸಹಕಾರವನ್ನು ಶ್ಲಾಘಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT