ರಾಜ್ಯ

ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರು ಸಿದ್ಧರಿಲ್ಲ: ಸದನದಲ್ಲಿ ಪಕ್ಷಾತೀತವಾಗಿ ಶಾಸಕರ ಪ್ರಸ್ತಾಪ

Ramyashree GN

ಬೆಂಗಳೂರು: ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದಿರುವ ಬಗ್ಗೆ ಪಕ್ಷಾತೀತವಾಗಿ ಶಾಸಕರು ಪ್ರಸ್ತಾಪಿಸಿದರು. ವೈದ್ಯರ ವೇತನವನ್ನು ಹೆಚ್ಚಿಸಬೇಕು ಮತ್ತು ಅವರ ಕೆಲಸದ ಸ್ಥಳದಲ್ಲಿ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು. 

ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ, ಹೊಸ ವೈದ್ಯರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸುತ್ತಾರೆಯೇ ಹೊರತು ಹಳ್ಳಿಗಳಲ್ಲಿರುವ ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಲ್ಲ ಎಂದರು.

ಮುಂದುವರಿದು, ಈ ವೈದ್ಯರು ಪ್ರತಿಷ್ಠಿತ ಸಂಸ್ಥೆಗಳಿಂದ ಪದವೀಧರರು, ಅವರು ಜವಾಬ್ದಾರಿಯುತ ವ್ಯಕ್ತಿಗಳು. ವೈದ್ಯರ ಕೊರತೆಯಿಂದ ಹಲವು ಶಾಸಕರು ಸಮಸ್ಯೆ ಎದುರಿಸುತ್ತಿದ್ದಾರೆ. ವೈದ್ಯರ ಮನಸ್ಥಿತಿ ಬದಲಾಗಬೇಕು. ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಪ್ರೇರೇಪಿಸಬೇಕು. ಸರ್ಕಾರ ಕೂಡ ಅವರಿಗಾಗಿ ಮತ್ತು ಅವರ ಶಿಕ್ಷಣಕ್ಕಾಗಿ ಹಣವನ್ನು ಖರ್ಚು ಮಾಡುತ್ತದೆ. ಅವರಿಗೂ ಸೇವಾ ಮನೋಭಾವನೆ ಇರಬೇಕು ಎಂದು ಹೇಳಿದರು.

ಸದನಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತಿ 1000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ, ಭಾರತದಲ್ಲಿ ಇದು 1,400 ಜನರಿದ್ದಾರೆ. ಪದವಿ ಮತ್ತು ಸ್ನಾತಕೋತ್ತರ ಪದವಿಗಾಗಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚುತ್ತಿರುವಂತೆ ವಿಷಯಗಳು ಬದಲಾಗುತ್ತಿವೆ. ಕರ್ನಾಟಕದಲ್ಲಿ ಪಿಎಚ್‌ಸಿಗಳಿಗೆ ವೈದ್ಯರನ್ನು ನೇಮಕ ಮಾಡಿದ್ದೇವೆ. ಆದರೆ, ವೈದ್ಯರು ವಿಶೇಷವಾಗಿ ಉತ್ತರ ಕರ್ನಾಟಕಕ್ಕೆ ಹೋಗುತ್ತಿಲ್ಲ. ಶಿಕ್ಷಕರ ನಿಯೋಜನೆಯಂತೆಯೇ ವೈದ್ಯರ ನಿಯೋಜನೆಗೂ ಕೌನ್ಸೆಲಿಂಗ್ ನಡೆಸಬೇಕು' ಎಂದು ಹೇಳಿದರು.

SCROLL FOR NEXT