ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಚಾಕುವಿನಿಂದ ಇರಿದು ಹಣ ದೋಚಿದ್ದ ಇಬ್ಬರು ಕುಖ್ಯಾತ ದರೋಡೆಕೋರರ ಬಂಧನ

ಫೆಬ್ರುವರಿ 12 ರಂದು ಸುಂಕದಕಟ್ಟೆ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ದರೋಡೆಕೋರ ಮತ್ತು ಆತನ ಸಹಚರನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹಣ ದೋಚುವ ಮುನ್ನ ಆರೋಪಿಗಳು ಸಂತ್ರಸ್ತರಿಗೆ ಚಾಕುವಿನಿಂದ ಇರಿದಿದ್ದರು.

ಬೆಂಗಳೂರು: ಫೆಬ್ರುವರಿ 12 ರಂದು ಸುಂಕದಕಟ್ಟೆ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ದರೋಡೆಕೋರ ಮತ್ತು ಆತನ ಸಹಚರನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಹಣ ದೋಚುವ ಮುನ್ನ ಆರೋಪಿಗಳು ಸಂತ್ರಸ್ತರಿಗೆ ಚಾಕುವಿನಿಂದ ಇರಿದಿದ್ದರು.

ಆರೋಪಿಗಳಾದ ಕೃಷ್ಣ (26) ಮತ್ತು ನಿರಂಜನ್ (25) ಸುಂಕದಕಟ್ಟೆಯ ಹೊಯ್ಸಳನಗರ ನಿವಾಸಿಗಳಾಗಿದ್ದು, ಮೂಲತಃ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನವರು. ಸಂತ್ರಸ್ತ ಶಿವಣ್ಣ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಆರೋಪಿಗಳು ಚಾಕುವಿನಿಂದ ಇರಿದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿರುವ ಸಂತ್ರಸ್ತರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಿಂದ ಸುಮಾರು 1.5 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ದರೋಡೆ ಮಾಡಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದರು. ದರೋಡೆಗೆ ಬಳಸಿದ್ದ ಮಾರಕಾಸ್ತ್ರವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT