ಸಂಗ್ರಹ ಚಿತ್ರ 
ರಾಜ್ಯ

ಕದ್ದ ಕಾರಿಗೆ ಶಾಸಕ ಬೋಜೇಗೌಡ ಕಾರಿನ ನಂಬರ್ ಹಾಕಿ ಮಾರಾಟಕ್ಕೆ ಯತ್ನ, ಆರೋಪಿ ಬಂಧನ

ಕದ್ದ ಕಾರಿಗೆ ಶಾಸಕ ಬೋಜೇಗೌಡ ಅವರ ಕಾರಿನ ನಂಬರ್ ಹಾಕಿ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕದ್ದ ಕಾರಿಗೆ ಶಾಸಕ ಬೋಜೇಗೌಡ ಅವರ ಕಾರಿನ ನಂಬರ್ ಹಾಕಿ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಅವರ ದುಬಾರಿ ಕಾರಿಗೆ ನಂಬರ್ ಪ್ಲೇಟ್ ಅಳವಡಿಸಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಇರಿಸಿದ್ದ ಘಟನೆ ನಗರದ ಕ್ವೀನ್ಸ್ ರಸ್ತೆಯಲ್ಲಿ ನಡೆದಿದೆ. ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಪಕ್ಕದಲ್ಲೇ ಇರುವ ಐ ಕಾರ್ಸ್ ಸ್ಟುಡಿಯೋದಲ್ಲಿ ಬೋಜೇಗೌಡ ಅವರ ಕಾರಿನ ನಂಬರ್ ಪ್ಲೇಟ್ ಅಳವಡಿಸಲಾಗಿದ್ದ ಕಾರು ನಿಂತಿರುವುದನ್ನು ಅವರ ಆಪ್ತ ಸಹಾಯಕ ಮಾದೇಶ್ ಗಮನಿಸಿದ್ದಾರೆ. ತಕ್ಷಣ ಶೋರೂಂ ಒಳಗೆ ತೆರಳಿ ಕಾರಿನ ಬಗ್ಗೆ ವಿಚಾರಿಸಿದಾಗ, ’ಕಾರು ಮಾರಾಟಕ್ಕಿದೆ, ನಿಮಗೆ ಬೇಕಿತ್ತಾ ಟೆಸ್ಟ್ ರೈಡ್ ಮಾಡಿ ನೋಡುವಿರಾ ಎಂದು ಶೋರೂಂ ಸಿಬ್ಬಂದಿ ಕೇಳಿದ್ದಾರೆ.

ಮತ್ತಷ್ಟು ಅನುಮಾನಗೊಂಡು ಕಾರಿನ ದಾಖಲಾತಿಗಳನ್ನು ಪರಿಶೀಲಿಸಿದಾಗ ಅಚ್ಚರಿ ಎಂಬಂತೆ ಆರ್.ಸಿ ಕೂಡ ಬೋಜೇಗೌಡರ ಹೆಸರಿನಲ್ಲಿರುವುದು ಪತ್ತೆಯಾಗಿದೆ. ತಕ್ಷಣ ಬೋಜೇಗೌಡರಿಗೆ ಕರೆ ಮಾಡಿದ್ದ ಅವರ ಆಪ್ತ ಸಹಾಯಕ ಸರ್ ನಿಮ್ಮ ಕಾರ್ ಮಾರಾಟ ಮಾಡಿರುವಿರಾ ಎಂದು ಕೇಳಿದ್ದಾರೆ. ಅದಕ್ಕೆ ಬೋಜೇಗೌಡರು ಇಲ್ಲ, ಕಾರು ತಮ್ಮ ಬಳಿಯೇ ಇದೆ ಎಂದಾಗ, ಶೋರೂಂನಲ್ಲಿ ನಿಮ್ಮ ಕಾರಿನ ನಂಬರ್ ಮತ್ತೊಂದು ಕಾರು ಇದೆ ಎಂದು ವಿಷಯ ಮುಟ್ಟಿಸಿದ್ದಾರೆ. ಬಳಿಕ ಹೈಗ್ರೌಂಡ್ಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ.

ಮಾಲೀಕ ವಶಕ್ಕೆ:
ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಹೈಗ್ರೌಂಡ್ಸ್ ಪೊಲೀಸರು ಕಾರಿನ ಸಮೇತ ಐ ಕಾರ್ಸ್ ಸ್ಟುಡಿಯೋ ಮಾಲೀಕ ಇಮ್ರಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಗೆ ಬೇರೆಯವರು ಕಾರು ಕೊಟ್ಟಿದ್ದಾರೆ ಎಂದು ಇಮ್ರಾನ್ ಹೇಳುತ್ತಿದ್ದು, ವಿಚಾರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂಬರ್ ಬದಲಿಸಿ ಮಾರಾಟ:
ದುಬಾರಿ ಬೆಲೆಯ ಕಾರುಗಳನ್ನು ಕ್ಷಣಾರ್ಧದಲ್ಲಿ ಕದ್ದು ನಂಬರ್ ಪ್ಲೇಟ್ ಬದಲಾಯಿಸಿ ಸಾರ್ವಜನಿಕರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಕಳ್ಳನನ್ನು ಪುಲಕೇಶಿ ನಗರ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಮುಳಬಾಗಿಲು ಮೂಲದ ಮೊಹಮ್ಮದ್ ಫೈರೋಜ್ ಪಾಷಾ ಬಂಧಿತ ಆರೋಪಿ. ಈತನಿಂದ 20 ಲಕ್ಷ ರೂ. ಮೌಲ್ಯದ ಮಾರುತಿ ಬಲೆನೊ ಕಾರು, ಮಾರುತಿ ಈಕೋ ಹಾಗೂ ಮಿನಿ ಟೆಂಪೋವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ನಕಲಿ ದಾಖಲೆ ಸೃಷ್ಟಿ:
ಸಾರ್ವಜನಿಕ ಪ್ರದೇಶಗಳಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರುಗಳನ್ನು ಸುಲಭವಾಗಿ ಕಳ್ಳತನ ಮಾಡುತ್ತಿದ್ದ ಆರೋಪಿ ಓಎಲ್‌ಎಕ್ಸ್‌ಗೆ ಹೋಗಿ ಮಾರಾಟವಾಗುವ ಕಾರಿನ ನೋಂದಣಿ ಸಂಖ್ಯೆಯನ್ನು ತೆಗೆದುಕೊಂಡು ಕದ್ದ ಕಾರಿಗೆ ಬದಲಾಯಿಸುತ್ತಿದ್ದ. ಬಳಿಕ ಗ್ರಾಹಕರನ್ನು ಸಂಪರ್ಕಿಸಿ ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಅಸಲಿ ದಾಖಲಾತಿಯಂತೆ ನಕಲಿ ದಾಖಲೆ ಸೃಷ್ಟಿಸಿ ಮಾಲೀಕನ ಹೆಸರಿನಲ್ಲಿ ಸಹಿ ಹಾಕುತ್ತಿದ್ದ. ತ್ವರಿತವಾಗಿ ಹಣ ನೀಡುವಂತೆ ಒತ್ತಡ ಹಾಕುತ್ತಿರಲಿಲ್ಲ. ಇದರಿಂದ ಆರೋಪಿ ಮೇಲೆ ಸಾರ್ವಜನಿಕರಿಗೆ ನಂಬಿಕೆ ಹುಟ್ಟುವಂತೆ ಮಾಡಿದ್ದ ಎಂದು ಪೊಲೀಸರು ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT