ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ 
ರಾಜ್ಯ

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ: ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್‌ 11ರಂದು ಲೋಕಾರ್ಪಣೆಯಾಗಲಿದೆ.

ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್‌ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ.

ಇದರ ಜೊತೆಗೆ ಪ್ರಧಾನಿ ಮೋದಿ ಮೈಸೂರಿನಿಂದ ಕುಶಾಲನಗರದವರೆಗಿನ ಉದ್ದೇಶಿತ ಚತುಷ್ಪಥ ಎಕ್ಸ್‌ಪ್ರೆಸ್ ರಸ್ತೆಯ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶುಕ್ರವಾರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಈ ಯೋಜನೆ ಪೂರ್ಣಗೊಂಡಿರುವುದರಿಂದ, ಅವರೇ ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದು ಸೂಕ್ತ" ಎಂದು ಸಿಂಹ ಹೇಳಿದರು. ನೀವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ,  2029 ರವರೆಗೆ ಮೋದಿ ನಾಯಕತ್ವದಲ್ಲಿ ಸಂಸದರಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದರು.

ನಾನು ಇಲ್ಲಿಗೆ ಬಂದಿರುವುದು ದೀರ್ಘಾವಧಿಯ ರಾಜಕೀಯ ಮಾಡಲು ಅಲ್ಲ ಆದರೆ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು 15 ವರ್ಷಗಳ ಅವಧಿಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿಯಾಗಲು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT