ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಚಾಲುಕ್ಯ ಸರ್ಕಲ್ ನ ಅಪಾರ್ಟ್ಮೆಂಟ್ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ

ಚಾಲುಕ್ಯ ಸರ್ಕಲ್ ನಲ್ಲಿರುವ ಬಹುಮಹಡಿ ಕಟ್ಟಡದಿಂದ ಜಿಗಿದು ಅಪರಿಚಿತ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಬೆಂಗಳೂರು: ಚಾಲುಕ್ಯ ಸರ್ಕಲ್ ನಲ್ಲಿರುವ ಬಹುಮಹಡಿ ಕಟ್ಟಡದಿಂದ ಜಿಗಿದು ಅಪರಿಚಿತ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಇಂದು ಸಂಜೆ 6.30 ಸುಮಾರಿಗೆ ಅಪಾರ್ಟ್ ಮೆಂಟ್ ನ 10ನೇ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಯುವತಿ ಲಿಫ್ಟ್ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತಳು ಸೋಫಿಯ ಕಾಲೇಜಿನ ವಿದ್ಯಾರ್ಥಿನಿ 18 ವರ್ಷದ ಪ್ರಕೃತಿ ಎಂದು ತಿಳಿದುಬಂದಿದೆ.

ಹೈ ಪಾಯಿಂಟ್ ಅಪಾರ್ಟ್ ಮೆಂಟ್ ಗೆ ಹೊರಗಡೆಯಿಂದ ಮೊಬೈಲ್ ನಲ್ಲೇ ಮಾತನಾಡಿಕೊಂಡು ಯುವತಿ ಬಂದಿದ್ದಳು ಎಂದು ಸೆಕ್ಯುರಿಟಿ ಗಾರ್ಡ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕೃತಿ ಸಂಜಯನಗರ ನಿವಾಸಿಯಾಗಿದ್ದು ಆಕೆ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಪೋಷಕರು ಮಾಹಿತಿ ನೀಡಿದ್ದಾರೆ. ಇನ್ನು ಮೃತಳ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೋರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!