ಸಂಗ್ರಹ ಚಿತ್ರ 
ರಾಜ್ಯ

ಕೆಎಸ್‌ಒಯು ಹಗರಣ: ರಾಜ್ಯಪಾಲರಿಂದ ಆದೇಶ ಬಂದರೂ ತನಿಖೆಗೆ ಒಪ್ಪಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ!

2009-10 ಮತ್ತು 2015-16ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ನಡೆದಿರುವ ಹಣದ ದುರುಪಯೋಗದ ಕುರಿತು ರಾಜ್ಯಪಾಲರು ತನಿಖೆಗೆ ಒಪ್ಪಿಸುವಂತೆ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಬೆಳಗಾವಿ: 2009-10 ಮತ್ತು 2015-16ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ನಡೆದಿರುವ ಹಣದ ದುರುಪಯೋಗದ ಕುರಿತು ರಾಜ್ಯಪಾಲರು ತನಿಖೆಗೆ ಒಪ್ಪಿಸುವಂತೆ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

2022ರ ಏಪ್ರಿಲ್ ತಿಂಗಳಿನಲ್ಲಿ ರಾಜ್ಯಪಾಲರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರೆಂದು ತಿಳಿದುಬಂದಿದೆ.

ಫೆಬ್ರವರಿ 2022 ರಲ್ಲಿ ಕೆಎಸ್‌ಒಯು ಸಿಂಡಿಕೇಟ್ ಸಭೆ ನಡೆಸಿತ್ತು. ಚಾರ್ಟರ್ಡ್ ಅಕೌಂಟೆಂಟ್ ಮತ್ತು 2009 ರಿಂದ ಶಾಸನಬದ್ಧ ಆಡಿಟ್ ವರದಿಗಳನ್ನು ಪರಿಶೀಲಿಸಿದ ನಂತರ, ಸಿಬಿಐನಂತಹ ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ  ನಡೆಸುವಂತೆ ಸರ್ವಾನುಮತದಿಂದ ನಿರ್ಣಯಕೈಗೊಳ್ಳಲಾಗಿತ್ತು.

ನಿರ್ಣಯ ಹಿನ್ನೆಲೆಯಲ್ಲಿ ಫೆಬ್ರವರಿ 2020 ರಲ್ಲಿ, ಕೆಎಸ್‌ಒಯು ರಿಜಿಸ್ಟ್ರಾರ್ ಪ್ರೊ.ಆರ್.ರಾಜಣ್ಣ ಅವರು ರಾಜ್ಯಪಾಲರಿಗೆ ಪತ್ರವೊಂದನ್ನು ಬರೆದಿದ್ದರು. ದೇಶಾದ್ಯಂತ ವಿಶ್ವವಿದ್ಯಾನಿಲಯದ 205 ಸಹಯೋಗಿ ಸಂಸ್ಥೆಗಳಿಂದ ಸಂಗ್ರಹಿಸಲಾದ 250 ಕೋಟಿ ರೂಪಾಯಿಗಳ ದುರುಪಯೋಗವಾಗಿರುವುದನ್ನು ತಿಳಿಸಿದ್ದರು. ವಿಶ್ವವಿದ್ಯಾನಿಲಯದ ಪ್ರವೇಶ, ಪರೀಕ್ಷೆ, ಅಧ್ಯಯನ ಕೇಂದ್ರ ಮತ್ತು ಅಂಕಪಟ್ಟಿ ವಿಭಾಗಗಳ ರಸೀದಿಗಳಲ್ಲಿ ನಿಧಿ ದುರ್ಬಳಕೆಯಾಗಿದೆ ಎಂದು ಹೇಳಿದ್ದರು.

ಪ್ರಕರಣದ ಗಂಭೀರತೆಯನ್ನು ಮನಗಂಡ ರಾಜ್ಯಪಾಲರು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಏಪ್ರಿಲ್ 7, 2022 ರಂದು ಪತ್ರ ಬರೆದು ವಿವರವಾದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಕಚೇರಿ ಪತ್ರ ಬರೆದು 10 ತಿಂಗಳು ಕಳೆದರೂ ಸರ್ಕಾರ ಇನ್ನೂ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ.

ಕೆಎಸ್‌ಒಯುನ ಮಾಜಿ ಉಪಕುಲಪತಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಸ್ತುತ ವಿಸಿ ಪ್ರೊ.ವಿದ್ಯಾಶಂಕರ್ ಅವರು, ಈ ಕುರಿತು ಅಧಿಕೃತ ದಾಖಲೆಗಳನ್ನು ಹಂಚಿಕೊಂಡಿದ್ದು, ಹಣ ದುರುಪಯೋಗ ಆಗಿರುವುದನ್ನು ಬಹಿರಂಗಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT