ಮೃತ ತಂದೆ ನಾರಾಯಣಸ್ವಾಮಿ ಹಾಗೂ ಪಾಪಿ ಮಗ ಮಣಿಕಂಠ 
ರಾಜ್ಯ

ಬೆಂಗಳೂರು: ಸುಪಾರಿ ನೀಡಿ ತಂದೆ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿ ಮೂವರ ಸೆರೆ

ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿದಂತೆ ಮೂವರನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿದಂತೆ ಮೂವರನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಅಪಾರ್ಟ್ ಮೆಂಟ್ ವೊಂದರ ವಾಹನ ನಿಲುಗಡೆ ಪ್ರದೇಶದಲ್ಲಿ ತಂದೆ ನಾರಾಯಣಸ್ನಾಮಿಯನ್ನು ಕೊಲೆ ಮಾಡಿಸಿದ್ದ ಪುತ್ರ ಮಣಿಕಂಠ ಹಾಗೂ ಸುಪಾರಿ ಪಡೆದ ಶಿವಕುಮಾರ್, ನವೀನ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ. 

ಕಳೆದ ಫೆ.13 ರಂದು ಅಪಾರ್ಟ್ ಮೆಂಟ್ ನ ವಾಹನ ನಿಲುಗಡೆ ಪ್ರದೇಶದಲ್ಲಿ ನಾರಾಯಣಸ್ವಾಮಿ ಅವರ ಕೊಲೆ ಆಗಿತ್ತು. ಈ ಕೊಲೆಗೆ ಹಂತಕ ನವೀನ್ ಕುಮಾರ್ ಗೆ ಮುಂಗಡ 1 ಲಕ್ಷ ನೀಡಿದ್ದ ಮಣಿಕಂಠ, ತನ್ನ ತಂದೆಯನ್ನು ಕೊಲೆ ಮಾಡಲು 1 ಕೋಟಿ ರೂ. ಸುಪಾರಿ ನೀಡಿದ್ದ ಎಂದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಮಣಿಕಂಠ ಹಿಂದೆ ತನ್ನ ಮೊದಲ ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿ ಜಾಮೀನನ ಮೇಲೆ ಹೊರಗೆ ಬಂದು ಎರಡು ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ ಎಂದು ಡಿಸಿಪಿ ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಸಂಸತ್ತಿನಲ್ಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಚ್ ಕುರಿತು ಮಾತನಾಡಲು ಬಿಜೆಪಿ ಅವಕಾಶ ನೀಡಲಿಲ್ಲ: ಮೈಕ್ ಸ್ವಿಚ್ ಆಫ್ ಆಗಿತ್ತು! ರಾಹುಲ್ ಆರೋಪ

ಕಂಟೆಂಟ್ ಕ್ರಿಯೇಟರ್ ಆಗಲು ₹35 ಲಕ್ಷ ಸಂಬಳದ ಉದ್ಯೋಗ ತೊರೆದ ಟೆಕ್ಕಿ ದಂಪತಿ; ಒಂದೇ ವರ್ಷದಲ್ಲಿ ₹1 ಕೋಟಿಗೂ ಹೆಚ್ಚು ಆದಾಯ!

E20 ಇಂಧನದಿಂದ ವಾಹನಗಳ ಭಾಗಗಳಿಗೆ ಹಾನಿ?: ರಾಜ್ಯಸಭೆಯಲ್ಲಿ ಗಡ್ಕರಿ ಕೊಟ್ರು ಬಿಗ್ ಅಪ್ಡೇಟ್!

Indian Stock Market ಭರ್ಜರಿ ವಹಿವಾಟು; Sensex 888 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty50