ರಾಜ್ಯ

ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇ; ಟೋಲ್ ಸಂಗ್ರಹ ಮುಂದೂಡಿಕೆ- ಪ್ರತಾಪ್ ಸಿಂಹ

Nagaraja AB

ಮೈಸೂರು:  ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮೊದಲ ಹಂತದ ಟೋಲ್ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹ ಕಾರ್ಯವನ್ನು ಮುಂದೂಡಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಟೋಲ್ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹಂಚಿಕೊಂಡಿರುವ ಪ್ರತಾಪ್ ಸಿಂಹ, ಸೇವಾ ರಸ್ತೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಟೋಲ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಮಾರ್ಚ್ 15ರ ನಂತರ ಟೋಲ್ ಸಂಗ್ರಹಿಸಲು ಉದ್ದೇಶಿಸಲಾಗಿದೆ. ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಅವಕಾಶವಿರಲಿದೆ. ಸರ್ವೀಸ್ ರಸ್ತೆ ಪೂರ್ಣಗೊಂಡ ಬಳಿಕ ಅಪಘಾತ ಮುಕ್ತ ರಸ್ತೆಯನ್ನಾಗಿಸುವ ಉದ್ದೇಶದಿಂದಾಗಿ ಅವುಗಳಿಗೆ ಅವಕಾಶ ಕೊಡುವುದಿಲ್ಲ. ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳು ಸರ್ವೀಸ್ ರಸ್ತೆಯನ್ನು ಬಳಸಿಕೊಳ್ಳಬಹುದು. ಇದರಿಂದ ಅವರು ಟೋಲ್ ಪಾವತಿಸುವುದು ಕೂಡಾ ತಪ್ಪಲಿದೆ ಎಂದು ತಿಳಿಸಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬರುವ ಬೆಂಗಳೂರು ನಗರ ಜಿಲ್ಲೆಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿ ಬಳಿ ಬೆಂಗಳೂರು- ನಿಢಘಟ್ಟ ವಿಭಾಗದ 6ಲೇನ್ ಗಳ ಬಳಕೆಗಾಗಿ  ಇಂದಿನಿಂದ ಟೋಲ್ ಶುಲ್ಕ ಅನ್ವಯವಾಗಲಿದೆ. ಇದು 55.63 ಕಿ.ಮೀ ಇದ್ದು, ಟೋಲಿಂಗ್ ರಸ್ತೆಯಾಗಿದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿತ್ತು.

SCROLL FOR NEXT