ಬಿ.ಎಸ್.ಯಡಿಯೂರಪ್ಪ 
ರಾಜ್ಯ

ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಿ ಮೋದಿ: ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಭಾವುಕ ಭಾಷಣ

ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಶಿವಮೊಗ್ಗ: ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಯಡಿಯೂರಪ್ಪ ಅವರು ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು.

ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆ. ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ ಎಂದು ಹೇಳಿದರು.

ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ.

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್​ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

ಇದೇ ವೇಳೆ ತಾವು ರಾಜ್ಯದಲ್ಲಿ ಬಿಜೆಪಿ ಕಟ್ಟಿದ ದಿನಗಳನ್ನು, ಬಿಜೆಪಿ ಆಡಳಿತವನ್ನು ಯಡಿಯೂರಪ್ಪ ಅವರು ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!

ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?