ಸಂಗ್ರಹ ಚಿತ್ರ 
ರಾಜ್ಯ

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹೋದರಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿ ಸೇರಿ ಐವರ ವಿರುದ್ಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ,

ಬೆಂಗಳೂರು: ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಹೋದರಿ ಸೇರಿ ಐವರ ವಿರುದ್ಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ,

ಫೆಬ್ರವರಿ 23 ರಂದು ಲಗ್ಗೆರೆಯಲ್ಲಿರುವ ಮನೆಯೊಂದರಲ್ಲಿ ಮಹೇಶ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಾಸಕರ ಸಹೋದರಿ ಚಂದ್ರಕಲಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಲ್ಲೆಗೊಳಗಾಗಿರುವ ಮಹೇಶ್ ಅವರು ಚಂದ್ರಕಲಾ ಅವರ ಸಂಬಂಧಿ ಶಿಲ್ಪಾ ಎಂಬುವವರನ್ನು ವಿವಾಹವಾಗಿದ್ದಾರೆ. ಪತಿ-ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ಸಮಸ್ಯೆ ಬಗೆಹರಿಸಲು ಚಂದ್ರಕಲಾ ಮತ್ತಿತರರು ಮಹೇಶ್ ಮನೆಗೆ ಹೋಗಿದ್ದರು,

''ಚರ್ಚೆಯ ವೇಳೆ ತೀವ್ರ ವಾಗ್ವಾದ ನಡೆದಿದ್ದು, ನಂತರ ಚಂದ್ರಕಲಾ ಮತ್ತು ಇತರರು ಮಾರಾಕಾಸ್ತ್ರಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಮಹೇಶ್ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಸಹೋದರ ರಾಜು ಎಂಬುವವರು, ಚಂದ್ರಕಲಾ, ಶಿಲ್ಪಾ, ಆಕೆಯ ತಾಯಿ ಭಾಗ್ಯಮ್ಮ, ಶಿವಮ್ಮ, ಸುನೀತಾ ಮತ್ತು ಕಾರು ಚಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ.

ಇದೀಗ ಆರೋಪಿಗಳು ತಲೆಮರೆಸಿಕೊಂಡಿದ್ದಾರೆನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗೆ ತೀವ್ರ ಹುಡುಕಾಟ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್