ಶಿವಾನಂದ ಪಾಟೀಲ್ 
ರಾಜ್ಯ

ಬಬಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಶಿವಾನಂದ ಪಾಟೀಲ್

ಬಬಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧನಿದ್ದೇನೆಂದು ಮಾಜಿ ಸಚಿವ, ಬಸವನಬಾಗೇವಾಡಿ ತಾಲೂಕಿನ ಕಾಂಗ್ರೆಸ್‌ ಶಾಸಕ ಶಿವಾನಂದ ಪಾಟೀಲ್ ಅವರು ಹೇಳಿದ್ದಾರೆ.

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧನಿದ್ದೇನೆಂದು ಮಾಜಿ ಸಚಿವ, ಬಸವನಬಾಗೇವಾಡಿ ತಾಲೂಕಿನ ಕಾಂಗ್ರೆಸ್‌ ಶಾಸಕ ಶಿವಾನಂದ ಪಾಟೀಲ್ ಅವರು ಹೇಳಿದ್ದಾರೆ.

ಬಬಲೇಶ್ವರ ನನ್ನ ಹಳೆಯ ಕ್ಷೇತ್ರ. ಈ ಹಿಂದೆ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಕೆಲವು ಅನಿವಾರ್ಯ ಕಾರಣಗಳಿಂದ ಅದನ್ನು ತೊರೆಯಬೇಕಾಯಿತು, ಅದಕ್ಕೆ ಇಂದಿಗೂ ವಿಷಾದಿಸುತ್ತೇನೆಂದು ಹೇಳಿದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧನಿದ್ದೇನೆ. ಆದರೆ, ನಾನು ಎಲ್ಲಿಂದ ಸ್ಪರ್ಧಿಸಬೇಕೆಂಬುದನ್ನು ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಅವರ ನಿರ್ಧಾರಕ್ಕೆ ತಲೆ ಬಾಗುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಬಸವನಬಾಗೇವಾಡಿಯಿಂದ ಎಂ.ಬಿ.ಪಾಟೀಲ್ ಸ್ಪರ್ಧಿಸಿದರೆ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು.

ಎಂಬಿ ಪಾಟೀಲ್ ಅವರನ್ನು ಇದೇ ವೇಳೆ ಬಸವನಬಾಗೇವಾಡಿಯಿಂದ ಎಂ.ಬಿ.ಪಾಟೀಲ್ ಸ್ಪರ್ಧಿಸಿದರೆ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದರು. ಎಂಬಿ.ಪಾಟೀಲ್ ಅವರನ್ನು ಅವರನ್ನು ಪೂರ್ಣ ಹೃದಯದಿಂದ ಸ್ವಾಗತಿಸುವುದಲ್ಲದೆ, ಅವರ ಗೆಲುವಿಗಾಗಿ ಪ್ರಚಾರ ಮಾಡುತ್ತೇನೆಂದು ತಿಳಿಸಿದರು.

ಬಳಿಕ ಬಸವನಬಾಗೇವಾಡಿ, ವಿಜಯಪುರ ಮತ್ತು ಬಬಲೇಶ್ವರದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿರುವುದನ್ನು ಪಾಟೀಲ್ ಅವರು, ಒಪ್ಪಿಕೊಂಡಿದ್ದಾರೆ.

ಬಬಲೇಶ್ವರ ವಿಧಾನಸಭಾ ಕ್ಷೇತ್ರವನ್ನು ಈಗಾಗಲೇ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಅವರು ಪ್ರತಿನಿಧಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!