ಲಾಠಿಚಾರ್ಜ್ ನಡೆಸುತ್ತಿರುವ ಪೊಲೀಸರು. 
ರಾಜ್ಯ

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಜನವೋ ಜನ: ಕೋರಮಂಗಲದಲ್ಲಿ ಲಾಠಿಚಾರ್ಜ್

ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೆಲ ಮಹಿಳೆಯರಿಗೆ ಕಿಡಿಗೇಡಿಗಳು ಕಿರುಕುಳ ನೀಡಿರುವ ಘಟನೆಗಳು ನಡೆದಿದ್ದು, ಕೋರಮಂಗಲದಲ್ಲಿ ಲಾಠಿಚಾರ್ಜ್ ಆಗಿರುವುದಾಗಿ ತಿಳಿದುಬಂದಿದೆ.

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಕೆಲ ಮಹಿಳೆಯರಿಗೆ ಕಿಡಿಗೇಡಿಗಳು ಕಿರುಕುಳ ನೀಡಿರುವ ಘಟನೆಗಳು ನಡೆದಿದ್ದು, ಕೋರಮಂಗಲದಲ್ಲಿ ಲಾಠಿಚಾರ್ಜ್ ಆಗಿರುವುದಾಗಿ ತಿಳಿದುಬಂದಿದೆ.

ಚರ್ಚ್ ಸ್ಟ್ರೀಟ್‌ನಲ್ಲಿ ಪ್ರಿಯಕರನೊಂದಿಗೆ ಬಂದಿದ್ದ ಯುವತಿಯೊಬ್ಬಳಿಗೆ ಕಿಡಿಕೇಡಿಗಳು ಕಿರುಕುಳ ನೀಡಿದ್ದಾರೆ. ಈ ವೇಳೆ ಆಕೆಯ ಗೆಳೆಯ ದುಷ್ಕರ್ಮಿಗಳೊಂದಿಗೆ ಜಗಳಕ್ಕಿಳಿದಿದ್ದು, ಕೈಕೈ ಮಿಲಾಯಿಸಿದ್ದಾರೆ. ಆದರೆ, ಪೊಲೀಸರು ಬರುವಷ್ಟರದಲ್ಲಿ ಕಿಡಿಗೇಡಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಸಂತ್ರಸ್ತ ಯುವತಿ ಅಥವಾ ಆಕೆಯ ಗೆಳೆಯ ದೂರು ದಾಖಲಿಸಿದ್ದಾರೆಯೇ ಎಂಬುದನ್ನು ಖಚಿತಪಡಿಸಲು ಪೊಲೀಸರು ಸಂಪರ್ಕಕ್ಕೆ ಸಿಕ್ಕಿಲ್ಲ.

ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಪಬ್ ಗಳಲ್ಲಿ ಭಾರೀ ಪ್ರಮಾಣದಲ್ಲಿ ಜನರು ಸೇರಿದ್ದು, ಪಬ್‌ಗಳ ಒಳಗೆ ಜನರು ನೃತ್ಯ ಮಾಡುತ್ತಿರುವವರನ್ನು ನೋಡಲು ಜನರು ಪಬ್‌ಗಳ ಹೊರಗೆ ಸಾಕಷ್ಟು ಜನರು ನಿಂತಿದ್ದದ್ದು ಕಂಡು ಬಂದಿತ್ತು. ಈ ಜನಸಂದಣಿಯನ್ನು ನಿಯಂತ್ರಿಸಲು ಬೆಂಗಳೂರು ಪೊಲೀಸರು ಕೋರಮಂಗಲದಲ್ಲಿ ಲಾಠಿ ಚಾರ್ಜ್ ಮಾಡಿದ್ದಾರೆಂದು ತಿಳಿದುಬಂದಿದೆ.

ಹೊಸ ವರ್ಷ ಸಂಭ್ರಮ ಹಿನ್ನೆಲೆಯಲ್ಲಿ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ನಲ್ಲಿ ಭಾರಿ ಪೊಲೀಸರು ಭಾರೀ ಪ್ರಮಾಣದ ಬಿಗಿ ಬಂದೋಬಸ್ತ್ ನಿಯೋಜನೆಗೊಳಿಸಿದ್ದರು.

ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಪೊಲೀಸರು ಸಿಬಿಡಿ ಪ್ರದೇಶಗಳಲ್ಲಿ ಮತ್ತು ನಗರದಾದ್ಯಂತ 37 ಮಹಿಳಾ ಸುರಕ್ಷತಾ ದ್ವೀಪಗಳನ್ನು ರಚಿಸಿದ್ದಾರೆ. ಪ್ರತಿ 100 ಮೀಟರ್‌ಗೆ ವಾಚ್ ಟವರ್‌ಗಳನ್ನು ಹಾಕಿದ್ದಾರೆ.

ಚರ್ಚ್ ಸ್ಟ್ರೀಟ್ ಮತ್ತು ಇತರೆ ರಸ್ತೆಗಳಲ್ಲಿ ಬಿಬಿಎಂಪಿ ಮಾರ್ಷಲ್‌ಗಳು ಮಾಸ್ಕ್ ಧರಿಸುವಂತೆ ಜನರಿಗೆ ಸಲಹೆ ನೀಡುತ್ತಿರುವುದು ಕಂಡುಬಂದಿತು. ಡ್ರಗ್ಸ್ ದಂಧೆ ನಡೆಸುವ ಯಾವುದೇ ಯತ್ನಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದರು.

ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರ, ಜೆಪಿ ನಗರ ಸೇರಿದಂತೆ ಹಲವು ಪಬ್‌ಗಳಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿತ್ತು.

ಕುಡಿದು ವಾಹನ ಚಲಾಯಿಸುವುದನ್ನು ತಡೆಯಲು 200 ಪ್ರದೇಶಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಹಾಕಲಾಗಿದೆ. ಪೋಸ್ಟ್‌ಗಳಲ್ಲಿನ ಸಿಬ್ಬಂದಿಗಳು ಮದ್ಯ ಸೇವಿಸಿ ವಾಹನ ಚಲಾಯಿಸಿದ ಹಲವು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video