ಮಾಧ್ಯಮ ಪ್ರತಿನಿಧಿಗಳ ಮುಂದೆ ಸಿಎಂ ಬೊಮ್ಮಾಯಿ 
ರಾಜ್ಯ

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 'ನಂದಿನಿ ವಿಲೀನವಾಗಲಿದೆ ಎಂದು ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ.  ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.

ಒಟ್ಟಾಗಿ ಕೆಲಸ ಮಾಡಿದರೆ ಲಾಭ:
ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು.

ಇದೇ ವೇಳೆ ಮೀಸಲಾತಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ಕಷ್ಟವಾಗುತ್ತಿದೆ. ಅದಕ್ಕೆ ವ್ಯಾಖ್ಯಾನ ಮಾಡಲು ಬರುವುದಿಲ್ಲ. ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!