ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಹೊಸ ವರ್ಷದ ಪಾರ್ಟಿ ವೇಳೆ ಗೆಳೆಯನಿಗೆ ಇರಿದ ಸ್ನೇಹಿತ

ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಪಾನಮತ್ತರಾಗಿದ್ದ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಹೊಸ ವರ್ಷಾಚರಣೆಯ ಪಾರ್ಟಿ ವೇಳೆ ಪಾನಮತ್ತರಾಗಿದ್ದ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಈ ವೇಳೆ ಸ್ನೇಹಿತನೊಬ್ಬ ತನ್ನ ಗೆಳೆಯನಿಗೆ ಚಾಕುವಿನಿಂದ ಇರಿದಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಪೀಣ್ಯ 4ನೇ ಬ್ಲಾಕ್ ನಿವಾಸಿ ಪ್ರಶಾಂತ್ ಎ (30) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ. ಭಾನುವಾರ ಮುಂಜಾನೆ 1.30ರ ಸುಮಾರಿಗೆ ಘಟನೆ ನಡೆದಿದೆ.

ಪ್ರಕರಣ ಸಂಬಂಧ ಪೊಲೀಸರು ಚೂರಿಯಿಂದ ಇರಿದ ಪ್ರಶಾಂತ್ (31) ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆ.

ಸಂತ್ರಸ್ತ ವ್ಯಕ್ತಿ ಶನಿವಾರ ರಾತ್ರಿ ಪೀಣ್ಯ 4ನೇ ಬ್ಲಾಕ್‌ನಲ್ಲಿರುವ ಸ್ನೇಹಿತನ ಮನೆಗೆ ಹೋಗಿದ್ದು, ಈ ವೇಳೆ ಇಬ್ಬರೂ ಮದ್ಯ ಸೇವಿಸಿದ್ದಾರೆ. ನಂತರ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕುಪಿತನಾದ ಪ್ರಶಾಂತ್ ಸ್ನೇಹಿತನಿಗೆ ಇರಿದಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

5,000 ಕೊಟ್ಟರೂ ತಗೋಳಿ, ಆದರೆ ಅವರಿಗೆ ಶಿಳ್ಳೆ ಹೊಡೆದು ಹೇಳಿ': DMK ವಿರುದ್ಧ TVK ಮುಖ್ಯಸ್ಥ ವಿಜಯ್ ವಾಗ್ದಾಳಿ

ಚುನಾವಣೆ ಹೊಸ್ತಿಲಲ್ಲೇ TN ಮಹಿಳೆಯರಿಗೆ ಬಂಪರ್: 1.31 ಕೋಟಿ ಖಾತೆಗಳಿಗೆ 5 ಸಾವಿರ ಜಮೆ; ಮತ್ತೆ ಅಧಿಕಾರಕ್ಕೆ ಬಂದರೆ 2 ಸಾವಿರ - ಸಿಎಂ ಸ್ಟಾಲಿನ್

SCROLL FOR NEXT