ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹಾವೇರಿ: ಮೂವರು ಯುವಕರು ಜಲ ಸಮಾಧಿ

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ.

ಘಟನಾ ಸ್ಥಳದಲ್ಲಿ ಪೊಲೀಸರ ಪರಿಶೀಲನೆ
Nagaraja AB
Updated On : 2 Jan 2023, 6:56 pm

ಹಾವೇರಿ: ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ.

ಮೃತರನ್ನು ನವೀನ್ ಕುರಗುಂದ (20) ವಿಕಾಸ್ ಪಾಟೀಲ್ (20 ಹಾಗೂ ನೇಪಾಳ ಮೂಲದ  ಪ್ರೇಮ್ ಬೋರಾ (25) ಎಂದು ಗುರುತಿಸಲಾಗಿದೆ. ಹೊಸ ವರ್ಷದ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ  ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬೆಳಗ್ಗೆಯಿಂದಲೇ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ. ಹಲಗೇರಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments