ಪ್ರಸನ್ನ ಭಟ್ 
ರಾಜ್ಯ

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಮೆಚ್ಚಿನ ಫೋಟೋಗ್ರಾಫರ್ ರಾಮನಗರ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ರಾಮನಗರ: ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಭಟ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ಪ್ರಸನ್ನ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾವತ್ತೂರು ಕೆರೆಗೆ  ಹೊಸ ವರ್ಷಾಚರಣೆ ಮಾಡಲು ಸಹೋದರ ಕೌಶಿಕ್ ಸೇರಿ ಐವರು ಸ್ನೇಹಿತರ ಜೊತೆ ಪ್ರಸನ್ನ  ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಾಡಲು ಹೋಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್ ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.

ಸಂಸದ ಬಿ.ವೈ.ರಾಘವೇಂದ್ರ ಅವರು ಅಧಿವೇಶನದಲ್ಲಿದ್ದು, ಪ್ರಸನ್ನ ಅವರು ರಜೆಯಲ್ಲಿದ್ದ ಕಾರಣದಿಂದಾಗಿ ಕನಕಪುರದಲ್ಲಿದ್ದ ಸ್ನೇಹಿತ ಕೌಶಿಕ್ ಮನೆಗೆ ಬಂದಿದ್ದರು.

ಮಾವತ್ತೂರು ಕೆರೆಯಲ್ಲಿ ಈಜಲು ಹೋದಾಗ ಪ್ರಸನ್ನ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಭಾನುವಾರ ರಾತ್ರಿ ಶವ ಪತ್ತೆಯಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT