ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಟೆಕ್ಕಿಯಲ್ಲಿ ಓಮಿಕ್ರಾನ್ ರೂಪಾಂತರಿ ಬಿಎಫ್.7.4 ಪತ್ತೆ?: ನಗರದಲ್ಲಿ ಹೆಚ್ಚಿದ ಕೋವಿಡ್ ಆತಂಕ

ಡಿಸೆಂಬರ್‌ನಲ್ಲಿ ಜರ್ಮನಿಯಿಂದ ಆಗಮಿಸಿದ ಅಂತರಾಷ್ಟ್ರೀಯ ಪ್ರಯಾಣಿಕರೊಬ್ಬರ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್'ನ ಬಿಎಫ್ 7.4 ಪತ್ತೆಯಾಗಿದ್ದು, ಈ ಬೆಳವಣಿಗೆ ನಗರದಲ್ಲಿ ಮಹಾಮಾರಿ ಕೋವಿಡ್ ಕುರಿತು ಆತಂಕ ಹೆಚ್ಚಾಗುವಂತೆ ಮಾಡಿದೆ.

ಸಂಗ್ರಹ ಚಿತ್ರ
Manjula VN
Updated On : 3 Jan 2023, 12:20 pm

ಬೆಂಗಳೂರು: ಡಿಸೆಂಬರ್‌ನಲ್ಲಿ ಜರ್ಮನಿಯಿಂದ ಆಗಮಿಸಿದ ಅಂತರಾಷ್ಟ್ರೀಯ ಪ್ರಯಾಣಿಕರೊಬ್ಬರ ಜೀನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷೆಯಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್'ನ ಬಿಎಫ್ 7.4 ಪತ್ತೆಯಾಗಿದ್ದು, ಈ ಬೆಳವಣಿಗೆ ನಗರದಲ್ಲಿ ಮಹಾಮಾರಿ ಕೋವಿಡ್ ಕುರಿತು ಆತಂಕ ಹೆಚ್ಚಾಗುವಂತೆ ಮಾಡಿದೆ.

ಈ ಹೊಸ ರೂಪಾಂತರಿಯು ಒಮಿಕ್ರಾನ್‌ನ ಬಿಎ.5ಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಆದರೆ, ಈ ಹೊಸ ರೂಪಾಂತರಿ ವೈರಲ್ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿಲ್ಲ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ ರಂದೀಪ್ ಅವರು ಪ್ರತಿಕ್ರಿಯೆ ನೀಡಿ, ಯಾವುದೇ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

Advertisement

Advertisement

ಇದನ್ನೂ ಓದಿ: ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 134 ಹೊಸ ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಜರ್ಮನಿಯಿಂದ ಹಿಂದಿರುಗಿದ 35 ವರ್ಷದ ವ್ಯಕ್ತಿಯನ್ನು ನಿಯಮಗಳ ಅನುಸಾರ ಡಿಸೆಂಬರ್‌ ತಿಂಗಳಿನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಬಳಿಕ ಮಾದರಿಯನ್ನು ಜೀನೋಮಿಕ್ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ. ಪರೀಕ್ಷೆ ವೇಳೆ ಸಮಯದಲ್ಲಿ, ನಾವು ಹೊಸ ರೂಪಾಂತರಿ ವೈರಸ್ BF.7.4 ಕಂಡು ಬಂದಿದೆ, ಇದು BA.5 ರೂಪಾಂತರಿ ವೈರಸ್'ಗೆ ಸೇರಿದ ಉಪ-ವಂಶವಾಗಿದೆ ಆರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿದೆ.

ಸೋಂಕಿನಿಂದ ಬಳಲುತ್ತಿದ್ದ ಟೆಕ್ಕಿ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಅವರೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೊಳಪಡಿಸಲಾಗಿದೆ. ಎಲ್ಲರ ವರದಿಯೂ ನೆಗೆಟಿವ್ ಬಂದಿದೆ. ಟೆಕ್ಕಿಯಲ್ಲಿ ಪತ್ತೆಯಾದ ಬಿಎಫ್.7.4 ರೂಪಾಂತರಿ ವೈರಸ್ ಅಪಾಯಕಾರಿ ಅಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ಹಿಂದೆ ಬಿಎ.5 ಪ್ರಕರಣಗಳು ಪತ್ತೆಯಾಗಿದ್ದವು. ಬಿಎಫ್.7.4 ರೂಪಾಂತರಿ ವೈರಲ್ ಈ ವೈರಸ್'ಗೆ ಸೇರಿದ ತಳಿಯಾಗಿದ್ದು, ಇದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಿದ ಕೋವಿಡ್ ಆತಂಕ: ದೈನಂದಿನ ಪರೀಕ್ಷೆಗಳ ಸಂಖ್ಯೆ 6,000ಕ್ಕೆ ಹೆಚ್ಚಿಸಲು ಅಧಿಕಾರಿಗಳು ಮುಂದು!

ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಮಾತನಾಡಿ, ಈಗಾಗಲೇ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಈ ವೈರಸ್ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಪರಿಸ್ಥಿತಿ ಬದಲಾವಣೆ ಕುರಿತು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಅದಕ್ಕೆ ಅನುಗುಣವಾಗಿ ಸೂಕ್ತ ಕ್ರಮಗಳ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಬೂಸ್ಟರ್ ಡೋಸ್‌ನ ಪರಿಣಾಮಕಾರಿತ್ವ ಕುರಿತು ಅಧ್ಯಯನ ನಡೆಸಲು ಜಯದೇವ ಆಸ್ಪತ್ರೆ ಮುಂದು
ಈ ನಡುವೆ ಶ್ರೀ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR) ಬೂಸ್ಟರ್ ಡೋಸ್ ಲಸಿಕೆಯ ಪರಿಣಾಮಕಾರಿತ್ವವನ್ನು ಅಧ್ಯಯನ ನಡೆಸಿದೆ.

ಸೆಪ್ಟೆಂಬರ್ 2021 ರಲ್ಲಿ, SJICR ವೈದ್ಯರು ಮತ್ತು ನರ್ಸ್ ಗಳು ಸೇರಿದಂತೆ 250 ಆರೋಗ್ಯ ಕಾರ್ಯಕರ್ತರಲ್ಲಿ ಅಧ್ಯಯನವನ್ನು ನಡೆಸಲಾಗಿದ್ದು, ಎರಡನೇ ಕೋವಿಡ್‌ಶೀಲ್ಡ್ ಡೋಸ್ ನಂತರ ಶೇ.99 ರಷ್ಟು ಪ್ರತಿಕಾಯಗಳು ಹಾಗೇ ಇರುವುದನ್ನು ಪತ್ತೆ ಮಾಡಿದೆ. ಮುಂಬರುವ ಅಧ್ಯಯನವು ಬೂಸ್ಟರ್ ಶಾಟ್ ತೆಗೆದುಕೊಂಡವರಲ್ಲಿ SARS-CoV-2 ವಿರೋಧಿ ಪ್ರತಿಕಾಯಗಳ ಮಟ್ಟವನ್ನು ವೈಜ್ಞಾನಿಕವಾಗಿ ನಿರ್ಣಯಿಸುವ ಗುರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಸಂಭ್ರಮದಿಂದ ಹೊಸ ವರ್ಷಾಚರಣೆ; ಕೋವಿಡ್ ಆತಂಕ ವ್ಯಕ್ತಪಡಿಸಿದ ವೈದ್ಯರು

"ದೇಹದಲ್ಲಿ ಎರಡು ರೀತಿಯ ಪ್ರತಿರಕ್ಷಣಾ ವ್ಯವಸ್ಥೆಗಳಿವೆ - ಬಿ ಮತ್ತು ಟಿ ಜೀವಕೋಶಗಳು. ಅವುಗಳಲ್ಲಿ, ಬಿ ಜೀವಕೋಶದ ಪ್ರತಿರಕ್ಷೆಯನ್ನು ಸುಲಭವಾಗಿ ಅಳೆಯಬಹುದು. ಎರಡನೇ ಡೋಸ್ ಲಸಿಕೆ ಪಡೆದ 9-10 ತಿಂಗಳ ನಂತರ ಪ್ರತಿಕಾಯಗಳು ಕ್ಷೀಣಿಸಬಹುದು. ಪ್ರತಿರಕ್ಷೆ ಹೆಚ್ಚಿಸಿಕೊಳ್ಳಲು ಬೂಸ್ಟರ್ ಡೋಸ್‌ಗಳನ್ನು ತೆಗೆದುಕೊಳ್ಳುವುದನ್ನು ಅಧ್ಯಯನ ಶಿಫಾರಸು ಮಾಡಿದೆ.

ಬೂಸ್ಟರ್ ಡೋಸ್ ತೆಗೆದುಕೊಂಡವರಲ್ಲಿ ಪ್ರತಿಕಾಯಗಳ ಮಟ್ಟವನ್ನು ವೈಜ್ಞಾನಿಕವಾಗಿ ನಿರ್ಣಯಿಸಲು, ಲಸಿಕೆ ಪಡೆದುಕೊಂಡ 250 ಸಿಬ್ಬಂದಿಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು ಎಂದು ರಾಜ್ಯದ ಕ್ಲಿನಿಕಲ್ ತಜ್ಞರ ಸಮಿತಿಯ ಸದಸ್ಯರೂ ಆಗಿರುವ SJICR ನಿರ್ದೇಶಕ ಸಿ ಎನ್ ಮಂಜುನಾಥ್ ಹೇಳಿದ್ದಾರೆ.

ಹಿಂದಿನ ಅಧ್ಯಯನವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಸಕಾರಾತ್ಮಕ ಪ್ರತಿರಕ್ಷಣಾ-ಪ್ರತಿಕ್ರಿಯೆ ಫಲಿತಾಂಶಗಳು ಆರೋಗ್ಯ ಕಾರ್ಯಕರ್ತರ ನೈತಿಕತೆಯನ್ನು ಹೆಚ್ಚಿಸಿದೆ ಮತ್ತು ಲಸಿಕೆ ತೆಗೆದುಕೊಳ್ಳಲು ಜನರನ್ನು ಪ್ರೇರೇಪಿಸಿದೆ ಎಂದು ತಿಳಿಸಿದ್ದಾರೆ.

ಚೀನಾ ಮತ್ತು ಇತರ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹಠಾತ್ ಉಲ್ಬಣಗೊಂಡ ನಂತರ, ಕರ್ನಾಟಕವು ಬೂಸ್ಟರ್ ಡೋಸ್ ಲಸಿಕೆ ನೀಡುವಿಕೆಯನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಬೂಸ್ಟರ್ ಡೋಸ್ ಕವರೇಜ್ ಸುಮಾರು 20-25% ರಷ್ಟಿದೆ. "ಪಾಸಿಟಿವಿಟಿ ದರವು ಹೆಚ್ಚಾಗುತ್ತಿದ್ದಂತೆ, ಜನರು ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಮುಂದೆ ಬರುತ್ತಿದ್ದಾರೆ ಎಂದು ಡಾ ಮಂಜುನಾಥ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments