ಸಿದ್ದೇಶ್ವರ ಸ್ವಾಮೀಜಿ ಜೊತೆಗಿರುವ ಸಿಎಂ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ 
ರಾಜ್ಯ

ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ವೇಳೆ ಭಕ್ತರು ಶಾಂತಿ, ಸಂಯಮದಿಂದ ಸಹಕರಿಸಿ: ಸಿಎಂ ಬೊಮ್ಮಾಯಿ ಮನವಿ

ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರಿಗಳ  ಅಂತ್ಯಕ್ರಿಯೆಗೆ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಸಹಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಬೆಂಗಳೂರು: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರಿಗಳ  ಅಂತ್ಯಕ್ರಿಯೆಗೆ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಸಹಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶ್ರೀಗಳ ಅಂತಿಮ ದರ್ಶನಕ್ಕಾಗಿ ವಿಜಯಪುರ ಜಿಲ್ಲಾಡಳಿತ, ಮುಖಂಡರಾದ ಎಂ. ಬಿ. ಪಾಟೀಲ್, ಬಸನಗೌಡರು, ಎಲ್ಲಾ ಜನಪ್ರತಿನಿಧಿಗಳು ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

 ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟು ಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ  ನಡೆದುಕೊಳ್ಳುವ ಜನ ಎಂದೆನಿಸುತ್ತದೆ ಎಂದಿದ್ದಾರೆ.

ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತೆ ಜನತೆಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!

ನವದೆಹಲಿ: ನ್ಯೂಸ್ ಏಜೆನ್ಸಿ UNI ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Video

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

SCROLL FOR NEXT