ಡಾ.ಚಂದ್ರಶೇಖರ ಕಂಬಾರ. 
ರಾಜ್ಯ

ನನ್ನ ನಾಟಕವನ್ನು ತಿರುಚಿದವರ ವಿರುದ್ಧ ಕ್ರಮ ಕೈಗೊಳ್ಳಿ: ಡಾ.ಚಂದ್ರಶೇಖರ ಕಂಬಾರ ಆಗ್ರಹ

ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ ''ಸಾಂಬಶಿವ ಪ್ರಹಸನ''ವನ್ನು ನನ್ನ ಅನುಮತಿ ಇಲ್ಲದೆ ಪ್ರದರ್ಶಿಸಿದ್ದಲ್ಲದೆ ಅಸಹ್ಯಕರವಾಗಿ ಪ್ರದರ್ಶ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರು ಆಗ್ರಹಿಸಿದ್ದಾರೆ.

ಮೈಸೂರು: ಮೈಸೂರಿನ ರಂಗಾಯಣದಲ್ಲಿ ನನ್ನ ನಾಟಕ ''ಸಾಂಬಶಿವ ಪ್ರಹಸನ''ವನ್ನು ನನ್ನ ಅನುಮತಿ ಇಲ್ಲದೆ ಪ್ರದರ್ಶಿಸಿದ್ದಲ್ಲದೆ ಅಸಹ್ಯಕರವಾಗಿ ಪ್ರದರ್ಶ ಮಾಡಲಾಗಿದ್ದು, ಇದಕ್ಕೆ ಕಾರಣರಾದ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ದೂರು ನೀಡಿರುವ ಅವರು, ಮೈಸೂರಿನ  ರಂಗಾಯಣದಲ್ಲಿ ನನ್ನ ನಾಟಕ ಸಾಂಬಶಿವ ಪ್ರಹಸನವನ್ನು ಅಸಹ್ಯವಾಗಿ ತಿರುಚಿ ಪ್ರದರ್ಶಿಸಿರುವ ಬಗ್ಗೆ ನನಗೆ ತುಂಬ ವಿಷಾದವಾಗಿದೆ. ಮೊದಲನೆಯದಾಗಿ ನನ್ನ ನಾಟಕ ಪ್ರದರ್ಶಿಸುವುದಕ್ಕೆ ನನ್ನ ಅನುಮತಿ ಕೇಳಲೇಬೇಕಾಗಿತ್ತು. ಆದರೆ ಇವರು ಕೇಳಿಲ್ಲ. ರಂಗಾಯಣವಾದರೂ ನನ್ನ ಅನುಮತಿ ಇಲ್ಲದ ನಾಟಕ ಪ್ರದರ್ಶನಕ್ಕೆ ಅವಕಾಶ ಕೊಟ್ಟಿರುವುದು ವಿಷಾದಕರ ಎಂದು ಹೇಳಿದ್ದಾರೆ.

ಎರಡನೆಯದಾಗಿ ನನ್ನ ಯಾವುದೇ ನಾಟಕಗಳಲ್ಲಿ ವ್ಯಕ್ತಿಗತ ನಿಂದನೆ ಇರುವುದು ಸಾಧ್ಯವಿಲ್ಲ. ಅನುಮತಿ ಇಲ್ಲದೆ ನಾಟಕವನ್ನು ಪ್ರದರ್ಶಿಸಿದ್ದಕ್ಕೆ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟವರಿಗೂ ಮತ್ತು ಇಲ್ಲದ ಸಾಹಿತ್ಯವನ್ನು ಸೇರಿಸಿದ್ದಕ್ಕೆ ನಿರ್ದೇಶಕರ ಮೇಲೂ ಹಾಗೂ ಈ ಅಹಿತಕರ ವಾತಾವರಣಕ್ಕೆ ಕಾರಣರಾದ ಸಂಬಂಧಪಟ್ಟ ಎಲ್ಲರ ಮೇಲೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ,

ಶನಿವಾರ ಪ್ರದರ್ಶನಗೊಂಡ ನಾಟಕದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT