ಸಂಗ್ರಹ ಚಿತ್ರ 
ರಾಜ್ಯ

ಇ-ವಿಧಾನಮಂಡಲ ಯೋಜನೆ: ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್

ಇ-ಆಡಳಿತ ಯೋಜನೆಯನ್ನು ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (ನೇವಾ) ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಎಂಎಲ್‌ಸಿ ಮತ್ತು ವಕೀಲ ರಮೇಶ್ ಬಾಬು ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಇ-ಆಡಳಿತ ಯೋಜನೆಯನ್ನು ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (ನೇವಾ) ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಎಂಎಲ್‌ಸಿ ಮತ್ತು ವಕೀಲ ರಮೇಶ್ ಬಾಬು ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತಂತೆ ಕಾಂಗ್ರೆಸ್‌ ಮುಖಂಡರೂ ಆದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭೆ ಮತ್ತು ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.‌

‘ಇ-ವಿಧಾನ ಮಂಡಲ ಯೋಜನೆ ಜಾರಿಗೆ 2016-17ರಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ರೂ.60.84 ಕೋಟಿ ಅಂದಾಜಿಸಿತ್ತು. ಆದರೆ, ಕರ್ನಾಟಕ ವಿಧಾನ ಮಂಡಲವು ಈ ಯೋಜನೆ ಜಾರಿಗೆ ಕಿಯೋನಿಕ್ಸ್ ಸಂಸ್ಥೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಿತ್ತು. ಇದರನ್ವಯ ಕಿಯೋನಿಕ್ಸ್‌, ಯೋಜನೆಗೆ ಸುಮಾರು ರೂ.254 ಕೋಟಿ ಮೊತ್ತ ತಗಲುವುದಾಗಿ ವರದಿ ನೀಡಿತ್ತು.

‘ಕಿಯೋನಿಕ್ಸ್ ಮೂಲಕ ಯೋಜನೆ ಜಾರಿ ಮಾಡಿದರೆ ರಾಜ್ಯದ ಬೊಕ್ಕಸಕ್ಕೆ ರೂ.254 ಕೋಟಿ ನಷ್ಟವಾಗಲಿದೆ. ಈ ಕುರಿತಂತೆ ಮಧ್ಯಪ್ರವೇಶಿಸಿ ಎಂದು ವಿಧಾನಸಭಾಧ್ಯಕ್ಷರಿಗೆ ಮನವಿ ಮಾಡಲಾಗಿತ್ತು. ಆದರೆ, ವಿಧಾನಸಭಾಧ್ಯಕ್ಷರು ಈ ಕುರಿತು ಗಮನ ಹರಿಸಿಲ್ಲ‘ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

‘ಕಿಯೋನಿಕ್ಸ್ ಮೂಲಕ ರೂ.254 ಕೋಟಿ ವೆಚ್ಚದಲ್ಲಿ ಇ-ವಿಧಾನ ಮಂಡಲ ಯೋಜನೆ ಜಾರಿ ಮಾಡುವುದಕ್ಕೆ ಬದಲಾಗಿ ‘ನೇವಾ’ ಮೂಲಕ ಜಾರಿಗೊಳಿಸಲು ಆದೇಶಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT