ಮರುಘಾಮಠದ ಶಿವಮೂರ್ತಿ ಶರಣರು. 
ರಾಜ್ಯ

ಡಾ.ಶಿವಮೂರ್ತಿ ಮುರುಘಾ ಶರಣರು ನಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯವೆಸಗಿಲ್ಲ: ವಸತಿ ನಿಲಯದ ಬಾಲಕಿಯರು

ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ತಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಮುರುಘಾ ಮಠದ ಅಕ್ಕಮಹಾದೇವಿ ವಸತಿ ನಿಲಯದಲ್ಲಿ ಉಳಿದುಕೊಂಡು ಮಠದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 103 ಬಾಲಕಿಯರು ಹೇಳಿಕೆ ನೀಡಿದ್ದಾರೆ.

ಚಿತ್ರದುರ್ಗ: ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ತಮ್ಮ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಮುರುಘಾ ಮಠದ ಅಕ್ಕಮಹಾದೇವಿ ವಸತಿ ನಿಲಯದಲ್ಲಿ ಉಳಿದುಕೊಂಡು ಮಠದ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 103 ಬಾಲಕಿಯರು ಹೇಳಿಕೆ ನೀಡಿದ್ದಾರೆ.

ಇಬ್ಬರು ಅಪ್ರಾಪ್ತ ಬಾಲಕಿಯರ ದೂರಿನ ಆಧಾರದ ಮೇಲೆ ಮುರುಘಾ ಮಠದ ಅಂದಿನ ಮುಖ್ಯಸ್ಥ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ದೂರು ದಾಖಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್ 1 ರಂದು ಮುರುಘಾ ಶರಣರನ್ನು ಬಂಧಿಸಲಾಗಿತ್ತು.

ಘಟನೆ ಬಳಿಕ ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಕೂಡಲೇ ಮಕ್ಕಳನ್ನು ಹಾಸ್ಟೆಲ್‌ನಿಂದ ಬಿಡುಗಡೆಗೊಳಿಸಿ ಆಯಾ ಜಿಲ್ಲೆಗಳಿಗೆ ಕಳುಹಿಸಿದೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಆಯಾ ಜಿಲ್ಲಾ ಆಡಳಿತಗಳಿಗೆ ಹೆಣ್ಣುಮಕ್ಕಳಿಗೆ ಕೌನ್ಸೆಲಿಂಗ್ ನಡೆಸುವಂತೆ ಮತ್ತು ಯಾವುದೇ ಲೈಂಗಿಕ ದೌರ್ಜನ್ಯದ ಬಗ್ಗೆ ವರದಿ ಮಾಡಿದರೆ ತಕ್ಷಣವೇ ಪ್ರಕರಣಗಳನ್ನು ದಾಖಲಿಸುವಂತೆ ಸೂಚಿಸಿದೆ.

ಹೀಗಾಗಿ ಆಯಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಚಿತ್ರದುರ್ಗ ಜಿಲ್ಲೆಯಲ್ಲಿ 46, ಬೆಂಗಳೂರಿನಲ್ಲಿ 1, ದಾವಣಗೆರೆಯಲ್ಲಿ 14, ಧಾರವಾಡದಲ್ಲಿ 2, ಬಾಗಲಕೋಟೆಯಲ್ಲಿ 3, ಬಳ್ಳಾರಿಯಲ್ಲಿ 17, ರಾಯಚೂರಿನಲ್ಲಿ 3, ಕೊಪ್ಪಳದಲ್ಲಿ 1, ಬೆಳಗಾವಿಯಲ್ಲಿ 6, ಶಿವಮೊಗ್ಗದಲ್ಲಿ 5 ಬಾಲಕಿಯರಿಗೆ ಮೂರು ಬಾರಿ ಕೌನ್ಸೆಲಿಂಗ್ ನಡೆಸಿವೆ. ಆದರೆ, ಯಾವುದೇ ಮಗು ಮಠಾಧೀಶರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿಲ್ಲ.

ಮಕ್ಕಳು ಅಂತಹ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲ ಎಂದು ಚಿತ್ರದುರ್ಗದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಗಳು ತಿಳಿಸಿದ್ದು, ಈ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಏತನ್ಮಧ್ಯೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಸಲ್ಲಿಸಿದ ಭಾಗಶಃ ಆರೋಪಪಟ್ಟಿಯಲ್ಲಿ ಮೊದಲ ಪೋಕ್ಸೊ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಆರಂಭದಲ್ಲಿ ಹಿಂಜರಿದಿದ್ದರು. ನಂತರ ಪರೀಕ್ಷೆಗೊಳಗಾದರು ಎಂದು ತಿಳಿದುಬಂದಿದೆ.

ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳ ವರದಿಯಲ್ಲಿಯೂ ಯಾವುದೇ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿದುಬಂದಿದೆ.

ಚಾರ್ಜ್‌ಶೀಟ್‌ನಲ್ಲಿನ ವೈದ್ಯಕೀಯ ವರದಿಯಲ್ಲಿಯೂ ಇಬ್ಬರೂ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದೆ ಎಂದು ತಿಳಿದುಬಂದಿದೆ.

ಆದಾಗ್ಯೂ, ವೈದ್ಯಕೀಯ ಪರೀಕ್ಷೆಗೆ ಒಳಪಡುವ ಮೊದಲು ಆಪ್ತಸಮಾಲೋಚಕರ ಮುಂದೆ ನೀಡಿದ ಹೇಳಿಕೆಯಲ್ಲಿ, ಮಠಾಧೀಶರು ಪದೇ ಪದೇ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸುತ್ತಿದ್ದರು ಎಂದು ಹುಡುಗಿಯರು ಹೇಳಿಕೊಂಡಿದ್ದು, ಇದು ದಾಖಲೆಗಳಲ್ಲಿಯೂ ನೋಂದಾಯಿಸಲ್ಪಟ್ಟಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT