ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು; ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಮೃತಪಟ್ಟಿದ್ದಾರೆ.

ಅಪಘಾತಗೊಂಡ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರ ಪರಿಶೀಲನೆ
Sumana Upadhyaya
Updated On : 5 Jan 2023, 3:41 pm

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಮೃತಪಟ್ಟಿದ್ದಾರೆ. 

ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಮೃತ ದುರ್ದೈವಿಗಳಾಗಿದ್ದಾರೆ. ಇವರೆಲ್ಲರೂ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತಕ್ಕೀಡಾದ ಪಿಕ್ ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ. ಸದ್ಯ ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಾದಯಾತ್ರೆ ಹೊರಟವರು ಯಮನ ಪಾದ ಸೇರಿದರು: ಮೃತರು ಯಾತ್ರಾರ್ಥಿಗಳಾಗಿ ನಡೆದುಕೊಂಡು ಯಲ್ಲಮ್ಮ ದೇವಸ್ಥಾನಕ್ಕೆ ಹೊರಟ್ಟಿದ್ದರು. ಈ ವೇಳೆ ಪಾದಯಾತ್ರೆ ಹೊರಟವರನ್ನು ನಿಲ್ಲಿಸಿ ಬೊಲೆರೊ ವಾಹನದ ಚಾಲಕ ಡ್ರಾಪ್ ಕೊಡುವುದಾಗಿ  ಹತ್ತಿಸಿಕೊಂಡಿದ್ದಾನೆ. ಯಾತ್ರಾರ್ಥಿಗಳು ವಾಹನ ಹತ್ತಿದ ಕೆಲವೇ ನಿಮಿಷಗಳಲ್ಲಿ ಅಪಘಾತವಾಗಿ ಆರು ಜನ ಮೃತಪಟ್ಟಿದ್ದಾರೆ.

Advertisement

Advertisement

ರಾಜ್ಯ ಸರ್ಕಾರ ಪರಿಹಾರ: ಮೃತಪಟ್ಟ ಯಾತ್ರಿಗರಿಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ತಕ್ಷಣವೇ ಪರಿಹಾರ ಒದಗಿಸುವ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement