ರಾಜ್ಯ

ರಾಮನಗರ: ಸ್ನಾತಕೋತ್ತರ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ

Nagaraja AB

ರಾಮನಗರ: ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ತಾಲ್ಲೂಕಿನ ಜಿಗೇನಹಳ್ಳಿ ಮತ್ತು ಬಿಳಗುಂಬ ಗ್ರಾಮಗಳಲ್ಲಿ ಕಾಯ್ದಿರಿಸಿರುವ ಜಾಗವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ  ಗುರುವಾರ ಪರಿಶೀಲಿಸಿದರು. ಸಚಿವ ಗೋಪಾಲಯ್ಯ ಅವರೊಡನೆ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.

ಸ್ನಾತಕೋತ್ತರ ಕೇಂದ್ರದ ನಿರ್ಮಾಣಕ್ಕೆ ಒಟ್ಟು 9 ಎಕರೆ 35 ಗುಂಟೆ ಜಾಗವನ್ನು ಗುರುತಿಸಲಾಗಿದೆ. ಈ ಜಮೀನು ಸರಕಾರದ್ದೇ ಆಗಿರುವುದರಿಂದ ಯಾವ ಸಮಸ್ಯೆಯೂ ಇಲ್ಲ. ಹೀಗಾಗಿ ಸ್ನಾತಕೋತ್ತರ ಕೇಂದ್ರದ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ಸ್ನಾತಕೋತ್ತರ ಕೇಂದ್ರಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಸೂಕ್ತ ಸಂಪರ್ಕ ಕಲ್ಪಿಸಲಾಗುವುದು. ಒಟ್ಟಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಎಲ್ಲಾ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವಿನಾಶ್, ಜಿಪಂ ಸಿಇಒ ದಿಗ್ವಿಜಯ್ ಘೋಡ್ಕೆ, ಎಸ್ಪಿ ಸಂತೋಷ್ ಬಾಬು, ಉಪ ವಿಭಾಗಾಧಿಕಾರಿ ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

SCROLL FOR NEXT