ರಾಜ್ಯ

ಬೆಂಗಳೂರು: ಬಸವೇಶ್ವರ ನಗರದ NPS ಶಾಲೆಯಲ್ಲಿ ಬಾಂಬ್ ಭೀತಿ, ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡು

Srinivasamurthy VN

ಬೆಂಗಳೂರು: ಬೆಂಗಳೂರಿನ(Bengaluru) ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ ಬಂದಿದ್ದು, ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಬಾಂಬ್ ಪತ್ತೆ, ಶ್ವಾನ ದಳ ದೌಡಾಯಿಸಿದ್ದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲೆಯಲ್ಲಿನ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ಎನ್​ಪಿಎಸ್ ಶಾಲೆಗೆ ಇಂದು ಬಾಂಬ್ ಬೆದರಿಕೆ ಬಂದಿದೆ. ಇದರಿಂದ ಆತಂಕಗೊಂಡ ಶಾಲಾ ಆಡಳಿತ ಮಂಡಳಿ ಕೂಡಲೇ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಾಲೆ ಆವರಣದಲ್ಲಿ 4 ಜಿಲೆಟಿನ್ ಕಡ್ಡಿ ಇಟ್ಟಿರುವುದಾಗಿ ಇ-ಮೇಲ್ ಬಂದಿದ್ದು, ಬೆಳಗ್ಗೆ 11.30 ಮೇಲ್ ನೋಡಿದ ಶಾಲೆ ಸಿಬ್ಬಂದಿ‌, ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಸವೇಶ್ವರನಗರ, ರಾಜಾಜಿನಗರ ಠಾಣೆ ಪೊಲೀಸರ ಭೇಟಿ ನೀಡಿದ್ದಾರೆ. 

ಅಲ್ಲದೇ ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ನಂತರ ಹುಸಿ ಬೆದರಿಕೆ ಇ-ಮೇಲ್​ ಎಂಬುದು ದೃಢವಾಗಿದ್ದು, ಪ್ರಕರಣ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಪಶ್ಚಿಮ ವಿಭಾಗ ಪೊಲೀಸರುತನಿಖೆ ಮುಂದುವರಿಸಿದ್ದಾರೆ.

ಇ-ಮೇಲ್ ಬಂದಿರುವ ಕುರಿತು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ಬಿ. ನಿಂಬರಗಿ ಮಾತನಾಡಿದ್ದಾರೆ, "ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಪಿಎಸ್ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಗಿದೆ" ಎಂದು ಹೇಳಿದ್ದಾರೆ.

ಡಿಕೆಶಿ ಮಾಲೀಕತ್ವದ ಶಾಲೆಗೂ ಬೆದರಿಕೆ, 2ನೇ ಪ್ರಕರಣ
ಬೆಂಗಳೂರಿನಲ್ಲಿ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಬಂದಿರುವುದು ಇದು ಮೊದಲಲ್ಲ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮಾಲೀಕತ್ವದ ಬೆಂಗಳೂರಿನ ಆರ್‌ಆರ್ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಪೊಲೀಸರ ತನಿಖೆ ವೇಳೆ ಅದೇ ಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿತ್ತು.

10ನೇ ತರಗತಿಯ ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಪ್ಲ್ಯಾನ್ ಮಾಡಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಎನ್ನುವುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆರ್. ಆರ್. ನಗರ ಪೊಲೀಸರು ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪತ್ತೆ ಮಾಡಿದ್ದರು.

SCROLL FOR NEXT