ಸಂಗ್ರಹ ಚಿತ್ರ 
ರಾಜ್ಯ

ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ: 300 ಮಳಿಗೆಗಳ ಪೈಕಿ 218 ಮಳಿಗೆಗಳು ಬುಕ್

ಜನವರಿ 20 ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ -2023' ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈಗಾಗಲೇ 300 ಮಳಿಗೆಗಳ ಪೈಕಿ 218 ಮಳಿಗೆಗಳು ಬುಕ್ ಆಗಿವೆ ಎಂದು ತಿಳಿದುಬಂದಿದೆ.

ಬೆಂಗಳೂರು: ಜನವರಿ 20 ರಿಂದ ಮೂರು ದಿನಗಳ ಕಾಲ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ -2023' ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈಗಾಗಲೇ 300 ಮಳಿಗೆಗಳ ಪೈಕಿ 218 ಮಳಿಗೆಗಳು ಬುಕ್ ಆಗಿವೆ ಎಂದು ತಿಳಿದುಬಂದಿದೆ.

ನಗರದಲ್ಲಿ ನಿನ್ನೆಯಷ್ಟೇ ಸಿರಿಧಾನ್ಯ ಮೇಳದ ಪೂರ್ವಭಾವಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಲಾಗಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಮಾರುಕಟ್ಟೆ ಒದಗಿಸಲು ಹಾಗೂ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ ಎಂದು ಹೇಳಿದರು.

ಅರಮನೆ ಮೈದಾನದಲ್ಲಿನ 300 ಮಳಿಗೆಗಳ ಪೈಕಿ 110 ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಕಂಪನಿಗಳು ಈಗಾಗಲೇ 218 ಮಳಿಗೆಗಳನ್ನು ಕಾಯ್ದಿರಿಸಿವೆ. ಕೃಷಿ ಇಲಾಖೆಯು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ (KAPPEC) ಮತ್ತು ಸಾವಯವ ಕೃಷಿಗಾಗಿ ಅಂತರರಾಷ್ಟ್ರೀಯ ಸಾಮರ್ಥ್ಯ ಕೇಂದ್ರ (ICCOA) ಸಹಯೋಗದಲ್ಲಿ ಮೇಳವನ್ನು ಆಯೋಜಿಸುತ್ತಿದೆ.

ರಾಯಚೂರಿನಲ್ಲಿ ಸಿರಿಧಾನ್ಯ ಉದ್ಯಾನವನ ಸ್ಥಾಪಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡುತ್ತದೆ. ಈ ವಲಯದ ರೈತರು ಮತ್ತು ಗ್ರಾಹಕರ ನಡುವಿನ ಅಂತರವನ್ನು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಸಾಂಕ್ರಾಮಿಕ ರೋಗದ ನಂತರ, ಜನರು ಆರೋಗ್ಯಕರ ಜೀವನಶೈಲಿಯ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಅವರ ಯೋಗಕ್ಷೇಮಕ್ಕಾಗಿ ಆರೋಗ್ಯಕರ ಆಹಾರಕ್ರಮಕ್ಕೆ ಬದಲಾಗುತ್ತಿದ್ದಾರೆ. "ಜಗತ್ತು ಹೊಸ ಆಯ್ಕೆಗಳನ್ನು ಹುಡುಕುತ್ತಿರುವ ಸಮಯದಲ್ಲೇ ಸಿರಿಧಾನ್ಯ ಮತ್ತು ಸಾವಯವ ಪದಾರ್ಥಗಳು ಆದ್ಯತೆಯ ಆಹಾರವಾಗಿ ವೇಗವಾಗಿ ಹೊರಹೊಮ್ಮುತ್ತಿವೆ" ಎಂದು ಹೇಳಿದರು.

ಕೃಷಿ ಇಲಾಖೆ ಆಯುಕ್ತ ಬಿ ಶರತ್ ಅವರು ಮಾತನಾಡಿ, ಭಾರತದ ಗಮನ ಈಗ ಪೌಷ್ಟಿಕಾಂಶದ ಭದ್ರತೆಯ ಮೇಲೆ ಕೇಂದ್ರೀಕೃತವಾಗಿದೆ ಎಂದರು.

ಬೆಳೆಯುವ ರಾಗಿಗಳಲ್ಲಿ ಕೀಟನಾಶಕಗಳು ಮತ್ತು ರಾಸಾಯನಿಕಗಳ ಬಳಕೆಯು ಅತ್ಯಂತ ಕಡಿಮೆ ಅಥವಾ ಶೂನ್ಯವಾಗಿದೆ. "ಬೆಳೆಯುವ ಸಿರಿಧಾನ್ಯಗಳಲ್ಲಿ ಕೀಟನಾಶಕಗಳು ಮತ್ತು ರಾಸಾಯನಿಕಗಳ ಬಳಕೆಯು ಅತ್ಯಂತ ಕಡಿಮೆ ಅಥವಾ ಶೂನ್ಯವಾಗಿದೆ. ಭಾರತವು ಸಿರಿಧಾನ್ಯ ಉತ್ಪಾದನೆಯಲ್ಲಿ ವಿಶ್ವದಲ್ಲಿ ಮುಂಚೂಣಿಯಲ್ಲಿದೆ. ಉಳಿದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕವು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT