ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ; ವಿದ್ಯಾರ್ಥಿಯೇ ಮೇಲ್ ಕಳುಹಿಸಿರುವ ಶಂಕೆ!

ಬಸವೇಶ್ವರ ನಗರದ ಖಾಸಗಿ ಶಾಲೆಯ ಆವರಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ ಎಂಬ ನೆಪವೊಡ್ಡಿ ಇ-ಮೇಲ್ ಸಂಚಲನಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಯೊಬ್ಬ ಮೇಲ್ ಕಳುಹಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಯ ಆವರಣದಲ್ಲಿ ಸ್ಫೋಟಕಗಳನ್ನು ಇರಿಸಲಾಗಿದೆ ಎಂಬ ನೆಪವೊಡ್ಡಿ ಇ-ಮೇಲ್ ಸಂಚಲನಕ್ಕೆ ಕಾರಣವಾಗಿತ್ತು. ವಿದ್ಯಾರ್ಥಿಯೊಬ್ಬ ಮೇಲ್ ಕಳುಹಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಗುರುವಾರ ರಾತ್ರಿ 8.28 ಕ್ಕೆ ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿರುವ ನ್ಯಾಷನಲ್ ಅಕಾಡೆಮಿ ಫಾರ್ ಲರ್ನಿಂಗ್ (ಎನ್‌ಎಎಫ್‌ಎಲ್) ಶಾಲೆಗೆ ಇಮೇಲ್ ಕಳುಹಿಸಲಾಗಿದೆ. ಶಾಲಾ ಅಧಿಕಾರಿಗಳು ಬೆಳಿಗ್ಗೆ 11.30 ರ ಸುಮಾರಿಗೆ ಈ ಇ-ಮೇಲ್ ಅನ್ನು ಗಮನಿಸಿದ್ದಾರೆ. ನಂತರ ಅವರು ಬಸವೇಶ್ವರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕ್ಯಾಂಪಸ್‌ನಲ್ಲಿ ನಾಲ್ಕು ಜಿಲೆಟಿನ್ ಸ್ಟಿಕ್‌ಗಳನ್ನು ಇಡಲಾಗಿದ್ದು, ಶುಕ್ರವಾರ ಸ್ಫೋಟಗೊಳ್ಳಲಿದೆ ಎಂದು ದುಷ್ಕರ್ಮಿಗಳು ಇ-ಮೇಲ್‌ನಲ್ಲಿ ಹೇಳಿಕೊಂಡಿದ್ದಾರೆ.

ನರ್ಸರಿಯಿಂದ 12ನೇ ತರಗತಿವರೆಗಿನ ಸುಮಾರು 950 ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ ಮತ್ತು ಸ್ನಿಫರ್ ಸ್ಕ್ವಾಡ್‌ಗಳನ್ನು ಕರೆಸಲಾಯಿತು. ತರಗತಿ ಕೊಠಡಿಗಳು, ಪ್ರಯೋಗಾಲಯಗಳು, ಗ್ರಂಥಾಲಯಗಳು, ಶೌಚಾಲಯಗಳು, ಇತರ ಕೊಠಡಿಗಳು ಮತ್ತು ಆಟದ ಮೈದಾನವನ್ನು ಶೋಧಿಸಿದ ನಂತರ, ನಾವು ಅದು ಹುಸಿ ಬಾಂಬ್ ಬೆದರಿಕೆ ಎಂದು ಘೋಷಿಸಿದ್ದೇವೆ ಎಂದು ಡಿಸಿಪಿ (ಪಶ್ಚಿಮ) ಲಕ್ಷ್ಮಣ ನಿಂಬರಗಿ ಹೇಳಿದರು.

ಸದ್ಯ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಇಮೇಲ್ ಕಳುಹಿಸಿದವರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದರು.

ಸುದ್ದಿ ಹರಡುತ್ತಿದ್ದಂತೆ, ಆತಂಕಕ್ಕೊಳಗಾದ ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಗೆ ಆಗಮಿಸಿದರು. ಆದರೆ, ಶಾಲಾ ಆಡಳಿತ ಮಂಡಳಿಯು ಭಯಪಡುವ ಅಗತ್ಯವಿಲ್ಲ ಎಂದು ಸಂದೇಶಗಳನ್ನು ಕಳುಹಿಸಿತು. ಆದರೆ, ಕೆಲವು ವಿದ್ಯಾರ್ಥಿಗಳು ನಕಲಿ ಮೇಲ್ ಐಡಿ ಸೃಷ್ಟಿಸಿ ಇ-ಮೇಲ್ ಕಳುಹಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಶುಕ್ರವಾರ ಕೆಲವು ತರಗತಿಗಳಿಗೆ ಪರೀಕ್ಷೆ ನಿಗದಿಯಾಗಿದ್ದು, ಪರೀಕ್ಷೆ ನಡೆಯದಂತೆ ಕೆಲವು ವಿದ್ಯಾರ್ಥಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಐಪಿ ವಿಳಾಸದ ಸಹಾಯದಿಂದ ಮೇಲ್ ಕಳುಹಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಬೆಂಗಳೂರಿನ 20ಕ್ಕೂ ಹೆಚ್ಚು ಶಾಲೆಗಳಿಗೆ ಇದೇ ರೀತಿಯ ಇ-ಮೇಲ್‌ಗಳು ಬಂದಿರುವುದನ್ನು ಸ್ಮರಿಸಬಹುದು ಮತ್ತು ಪ್ರಕರಣಕ್ಕೆ ಇನ್ನು ಪರಿಹಾರ ಸಿಕ್ಕಿಲ್ಲ. ಜುಲೈನಲ್ಲಿ ರಾಜರಾಜೇಶ್ವರಿ ನಗರದ ಖಾಸಗಿ ಶಾಲೆಗೆ ಇದೇ ರೀತಿಯ ಇ-ಮೇಲ್ ಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT