ಬಿಸಿ ನಾಗೇಶ್ 
ರಾಜ್ಯ

ಫೆಬ್ರುವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ: ಸಚಿವ ನಾಗೇಶ್

ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ನಿರ್ಧರಿಸಿದ್ದು, ಫೆಬ್ರುವರಿಯಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, 'ಹೊಸ ಕಾಯ್ದೆ ಅನ್ವಯ ಪರಿಶಿಷ್ಟ ಜಾತಿ–ಪಂಗಡಕ್ಕೆ ನಿಗದಿಪಡಿಸಿರುವ ಮೀಸಲು ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದೆ. ಇದರಲ್ಲಿ 250 ಮಂದಿ ದೈಹಿಕ ಶಿಕ್ಷಕರ ನೇಮಕ ನಡೆಯಲಿದೆ. ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ (ಎನ್‌ಇಪಿ) ಇನ್ನೂ ಜಾರಿಯಾಗಿಲ್ಲ. ರಾಜ್ಯದ 300ರಿಂದ 400 ಆಯ್ದ ಶಾಲೆಗಳಲ್ಲಿ ಜನವರಿ 26ರಿಂದ ಜಾರಿಗೊಳಿಸಲು ಯೋಜಿಸಿದ್ದೇವೆ. ಅದಕ್ಕೆ ಅಗತ್ಯವಿರುವ ಪಠ್ಯಕ್ರಮ ಕೂಡ ರೂಪುಗೊಂಡಿದೆ. ಎನ್‌ಇಪಿ ಪಠ್ಯ ಆಧಾರಿತ ಅಲ್ಲ. ಚಟುವಟಿಕೆ ಆಧಾರಿತ ಶಿಕ್ಷಣ. ಅಲ್ಲಿ ಬಹಳ ಪುಸ್ತಕಗಳು ಇರುತ್ತವೆ ಎಂದೇನೂ ನನಗೆ ಅನ್ನಿಸಿಲ್ಲ. ಪಠ್ಯಕ್ರಮಕ್ಕೆ ತಕ್ಕಂತೆ ಶಿಕ್ಷಕರಿಗೆ ತರಬೇತಿ ನೀಡಿ ಅವರನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.

15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟು ಷರತ್ತಿನ ಮೇರೆಗೆ ನೇಮಕಾತಿ ಆದೇಶ ನೀಡಿ ಎಂಬುದು ಆಯ್ಕೆಯಾದ ಅಭ್ಯರ್ಥಿಗಳ ಅಳಲು. ಅದು ಕೂಡ ಗಮನದಲ್ಲಿದೆ. ಜನವರಿ 18ಕ್ಕೆ ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅಲ್ಲಿನ ಪ್ರಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ನಾಗೇಶ್ ಪ್ರತಿಕ್ರಿಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT