ಸಿಎಂ ಬೊಮ್ಮಾಯಿ 
ರಾಜ್ಯ

ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳ  ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಗೋಷ್ಠಿ, ವಿಚಾರಗಳನ್ನು  ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ

ಹಾವೇರಿ: ಗೋಷ್ಠಿ, ವಿಚಾರಗಳನ್ನು  ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಸಮಾರೋಪಗೊಳ್ಳುತ್ತಿದೆ. ಕಳೆದ ಎರಡು ದಿನಗಳಿಂದ ಸಾಹಿತ್ಯದ ಕಂಪು ಇಡೀ ಕರ್ನಾಟಕಕ್ಕೆ ಪಸರಿಸಿದೆ. ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದು, ವಿವಿಧ ಗೋಷ್ಠಿ ಗಳು ನಡೆದು, ಸಾಹಿತಿಗಳು ಪಾಲ್ಗೊಂಡಿದ್ದಾರೆ. ಇಲ್ಲಿಯ  ಯಶಸ್ವಿಯಾಗಿ ನಡೆದಿರುವ ಸಮ್ಮೇಳನಕ್ಕೆ ದುಡಿದ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ. ಸಾಹಿತಿಗಳ ಅನಿಸಿಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು  ವ್ಯವಸ್ಥಿತವಾಗಿ ನನ್ನ ತವರು ಜಿಲ್ಲೆಯಲ್ಲಿ ಎಲ್ಲರೂ ಸೇರಿ ನಡೆಸಿದ್ದು ಸಂತೋಷ ತಂದಿದೆ.ಇದಕ್ಕಾಗಿ  ಸಮಸ್ತ ಹಾವೇರಿ ಜಿಲ್ಲೆಯ ಜನರಿಗೆ ಅಭಿನಂದಿಸಿದರು. 

ಹಿಂಸೆಗೆ ಅವಕಾಶ ಸಲ್ಲದು

ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷರ ಮೇಲೆ ಗುಂಡಿನ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ಈಗಾಗಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿ ತಪ್ಪಿತಸ್ಥರನ್ನು ಬಂಧಿಸಿ ಕೂಡಲೇ ಕಾರ್ಯಾಚರಣೆ ಮಾಡಲು ತಿಳಿಸಿದೆ. ಭಿನ್ನ ಅಭಿಪ್ರಾಯ ಇದ್ದ ಮಾತ್ರಕ್ಕೆ ಹಿಂಸೆಗೆ ಅವಕಾಶ ನೀಡಬಾರದು. ಶ್ರೀ ರಾಮಸೇನೆ ಜಿಲ್ಲಾಧ್ಯಕ್ಷ ಚಿಕಿತ್ಸೆ ಯ ವೇಕವ ಭರಿಸಿ, ಅಪರಾಧಿಗಳನ್ನು ಬಂಧಿಸುವ ಕೆಲಸವನ್ನು ಪೊಲೀಸರು ಮಾಡುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT