ರಾಜ್ಯ

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಗುಂಡಿನ ದಾಳಿ: ಆರೋಪಿಗಳನ್ನು ಬಂಧಿಸಿದ ಪೊಲೀಸರು!

Vishwanath S

ಬೆಳಗಾವಿ: ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ನಡೆದು 24 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಭಿಜಿತ್ ಭಾತ್ಕಂಡೆ, ರಾಹುಲ್ ಕೊಡಚವಾಡ, ಜ್ಯೋತಿಬಾ ಗಂಗಾರಾಮ್​ ಎಂದು ಗುರುತಿಸಲಾಗಿದೆ. ರವಿ ಹತ್ಯೆಗೆ ಸುಫಾರಿ ನೀಡಿದ ಆರೋಪಿ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ತಿಳಿಸಿದ್ದಾರೆ.

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಕಳೆದ ರಾತ್ರಿ ಬೈಕ್ ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ದಾಳಿಯಲ್ಲಿ ರವಿ ಕೋಕಿತಕರ್ ಹಾಗೂ ಕಾರು ಚಾಲಕ ಮನೋಜ್ ದೇಸೂರಕರ್‌ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಿಂಡಲಗಾ ಗ್ರಾಮದ ಬಳಿ ರೋಡ್ ಹಂಪ್ ನಲ್ಲಿ ಕಾರು ನಿಧಾನ ಮಾಡಿದಾಗ ಅಪರಿಚಿತರು ಗುಂಡು ಹಾರಿಸಿದ್ದರು. ಗುಂಡು ರವಿ ಗದ್ದಕ್ಕೆ ತಗುಲಿ ನಂತರ ಚಾಲಕನ ಕೈಗೆ ತಗುಲಿತ್ತು. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸುವ ಸಲುವಾಗಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಅಂತೆ ಕಾರ್ಯಪೌವೃತ್ತರಾದ ಪೊಲೀಸರು ಆರೋಪಿಗಳ ಎಡೆಮುರಿಕಟ್ಟಿದ್ದಾದರೆ.

SCROLL FOR NEXT