ಬಿವೈ ರಾಘವೇಂದ್ರ 
ರಾಜ್ಯ

ಫೆ.12ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಸೋಮವಾರ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಸೋಮವಾರ ಮಾಹಿತಿ ನೀಡಿದ್ದಾರೆ.

ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಅವರು ಬಿವೈ ರಾಘವೇಂದ್ರ ಅವರು ಮಾತನಾಡಿದರು.

ವಿಮಾನ ನಿಲ್ದಾಣದ ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹೇಳಿದರು.

ಜಂಗಮ ಸಮಾಜ ಪವಿತ್ರವಾದುದು. ದೇವರಿಗೆ ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜ ಕೆಲಸ ಮಾಡುತ್ತಿದೆ. ದೇವರನ್ನು ಹತ್ತಿರದಿಂದ ಕಾಣಲು ಗುರುಗಳಿಗೆ ಬಿಟ್ಟರೆ, ಜಂಗಮ ಸಮಾಜಕ್ಕೆ ಶಕ್ತಿ ಇದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ ರೂತ1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರವೇ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ