ಎನ್​​ಎಸ್​​ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ 
ರಾಜ್ಯ

ಡಿ.17ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗುತ್ತಿದೆ: ಎನ್​​ಎಸ್​​ಯುಐ ಆರೋಪ

ಡಿಸೆಂಬರ್ 17 ರಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್​​ಎಸ್​​ಯುಐ) ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಅವರು ಆರೋಪಿಸಿದ್ದಾರೆ.

ಬೆಂಗಳೂರು: ಡಿಸೆಂಬರ್ 17 ರಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್​​ಎಸ್​​ಯುಐ) ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಅವರು ಆರೋಪಿಸಿದ್ದಾರೆ.

ಪ್ರತಿಭಟನೆ ಬಳಿಕ “ಕಾಲೇಜು ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ವಿಶೇಷವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮವನ್ನು ಹೊಂದಿರುವ ಮೊದಲ ಬ್ಯಾಚ್'ನ ವಿದ್ಯಾರ್ಥಿಗಳು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಬಗ್ಗೆ ಇನ್ನೂ ಗೊಂದಲದಲ್ಲಿದ್ದಾರೆ, ಇನ್ನೂ ಪಠ್ಯಪುಸ್ತಕಗಳನ್ನು ಸ್ವೀಕರಿಸಿಲ್ಲ. ಒಂದು ವರ್ಷದಿಂದ ಅವರಿಗೆ ಅಂಕಗಳನ್ನು ನೀಡಲಾಗಿಲ್ಲ. ಇಂತಹ ಬೆಳವಣಿಗೆ ಇದೇ ಮೊದಲ ಬಾರಿಗೆ ನಡೆಯುತ್ತಿದೆ ಎಂದು ಕೀರ್ತಿಯವರು ಆರೋಪಿಸಿದ್ದಾರೆ.

ಸ್ಕಾಲರ್ ಶಿಪ್ ಹಣ ಬಿಡುಗಡೆ ಮಾಡುವಲ್ಲಿ ವಿಫಲ, ಸರ್ಕಾರಿ ಕಾಲೇಜುಗಳು ಶುಲ್ಕ ಏರಿಕೆ ಸೇರಿದಂತೆ ಸರ್ಕಾರದ ಹಲವು ವೈಫಲ್ಯಗಳನ್ನು ಎತ್ತಿ ತೋರಿಸಲು ನಾವು ಬಂದ್'ಗೆ ಕರೆ ನೀಡಿದ್ದೆವು.  “ರಾಜ್ಯವ್ಯಾಪಿ ಸುಮಾರು 75 ಪ್ರತಿಶತ ಕಾಲೇಜುಗಳು ಬಂದ್'ನಲ್ಲಿ ಭಾಗವಹಿಸಿದ್ದವು. ಕೆಲ ಪಿಯು ಕಾಲೇಜುಗಳೂ ಸ್ವಯಂ ಪ್ರೇರಿತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಇದೀಗ ಬಂದ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿವೆ.

ಎನ್‌ಎಸ್‌ಯುಐಗೆ ವಿದ್ಯಾರ್ಥಿಗಳಿಂದ ಸುಮಾರು 1,500 ದೂರುಗಳನ್ನು ಬಂದಿವೆ. ಬಂದ್‌ನಲ್ಲಿ ಭಾಗವಹಿಸಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಕೆಲವು ಅಧ್ಯಾಪಕರು ಆರ್‌ಎಸ್‌ಎಸ್‌ನೊಂದಿಗೆ ಹೊಂದಿಕೊಂಡಿರುವುದರಿಂದ ಸರ್ಕಾರದ ವಿರುದ್ಧದ ಬಂದ್‌ನಲ್ಲಿ ಭಾಗವಹಿಸಿದ್ದರಿಂದ ಶಿಕ್ಷಕರು ತಮಗೆ ಇಂಟರ್ನಲ್ ಮಾರ್ಕ್ಸ್ ನೀಡುತ್ತಿಲ್ಲ. ಅಂಕಗಳನ್ನು ಕಡಿಮೆಗೊಳಿಸಿರುವುದಾಗಿ ಹೇಳಿಕೊಂಡಿದ್ದಾರೆ. ಅದರಲ್ಲೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳ ಹಾಜರಾತಿ ತಪ್ಪಾಗಿ ನಮೂದಿಸಿರುವುದರಿಂದ ಗೊಂದಲಕ್ಕೆ ಒಳಗಾಗಿದ್ದಾರೆ. ಕೆಲ ಅಧ್ಯಾಪಕರ ವಿದ್ಯಾರ್ಥಿಗಳ ಪೋಷಕರ ಸಂಪರ್ಕಿಸಿ ಅವರನ್ನು ಅಮಾನತುಗೊಳಿಸುವ ಬೆದರಿಕೆಯನ್ನೂ ಹಾಕಿರುವುದು ಕೇಳಿ ಬಂದಿದೆ.

ಕಾಲೇಜುಗಳಲ್ಲಿ ಕಳಪೆ ಮೂಲ ಸೌಕರ್ಯಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ಸಾರಿಗೆಯನ್ನು ಒದಗಿಸದಿರುವುದು ಸೇರಿದಂತೆ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಕಾಲಕ್ಕೆ ಸ್ಕಾಲರ್ ಶಿಪ್ ಸಿಗದ ಕಾರಣ ಕನಿಷ್ಠ ಎರಡು ಲಕ್ಷ ವಿದ್ಯಾರ್ಥಿಗಳು ಶಿಕ್ಷಣವನ್ನೇ ತ್ಯಜಿಸಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT