ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರಜಾಧ್ವನಿ ಯಾತ್ರೆ ಬಸ್ಸಿಗೆ ಕೆಪಿಸಿಸಿ ಕಚೇರಿ ಬಳಿ ಪೂಜೆ ಸಲ್ಲಿಸಿದ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ 
ರಾಜ್ಯ

ಮೆಟ್ರೊ ಪಿಲ್ಲರ್ ಕುಸಿದು ತಾಯಿ-ಮಗು ಸಾವು, ಇದು 40% ಸರ್ಕಾರದ ಫಲಿತಾಂಶ: ಡಿ ಕೆ ಶಿವಕುಮಾರ್ 

ಬೆಂಗಳೂರಿನ  ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಬೆಳಗ್ಗೆ ಕುಸಿದು ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆ ಮತ್ತು ಇನ್ನೊಬ್ಬ ಮಗಳು ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನ  ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಮಂಗಳವಾರ ಬೆಳಗ್ಗೆ ಕುಸಿದು ತಾಯಿ ಮತ್ತು ಮಗು ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆ ಮತ್ತು ಇನ್ನೊಬ್ಬ ಮಗಳು ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಬಗ್ಗೆ ವಿರೋಧ ಪಕ್ಷದ ನಾಯಕ ಡಿ ಕೆ ಶಿವಕುಮಾರ್ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು 40% ಕಮಿಷನ್ ಸರ್ಕಾರದ ಫಲಿತಾಂಶವಾಗಿದೆ. ಸರ್ಕಾರದ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಗುಣಮಟ್ಟವಿಲ್ಲ. ಸರ್ಕಾರದ ಸಚಿವರು, ಶಾಸಕರು, ಅಧಿಕಾರಿಗಳು ತಾವು ದುಡ್ಡು ಮಾಡಿಕೊಂಡು ಜನರಿಗೆ ಕಳಪೆ ಮಟ್ಟದ ಕೆಲಸ ಮಾಡಿಕೊಡುತ್ತಾರೆ. ಇದು ಸರ್ಕಾರದ ದಿವ್ಯ ನಿರ್ಲಕ್ಷ್ಯವಲ್ಲದೆ ಇನ್ನೇನು, ಸಾಮಾನ್ಯ ಜನರ ಜೀವನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!