ಸ್ಯಾಂಟ್ರೋ ರವಿ (ಸಂಗ್ರಹ ಚಿತ್ರ) 
ರಾಜ್ಯ

ಶೀಘ್ರವೇ ಸ್ಯಾಂಟ್ರೋ ರವಿ ಬಂಧನ, ದಾಖಲಾಗಿರುವ ಪ್ರಕರಣಗಳ ಬಗ್ಗೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. 

ಬೆಂಗಳೂರು: ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದ್ದು, ಆತನ ಚಲನವಲನಗಳ ಬಗ್ಗೆ ನಿಗಾ ಇಡಲಾಗಿದೆ. ಸದ್ಯ ಸ್ಯಾಂಟ್ರೋ ರವಿ ಹಿಂಬಾಲಕರ ವಿಚಾರಣೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆ ಬೇರೆ ಆಯಾಮದಲ್ಲಿ‌ ತನಿಖೆ ಆಗುತ್ತಿದ್ದು, ಎಲ್ಲಾ ರೀತಿಯ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆರೋಪಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗುತ್ತದೆ. ಆತನ ಮೇಲೆ ದಾಖಲಾಗಿರುವ ಪ್ರತಿಯೊಂದು ಪ್ರಕರಣಗಳನ್ನು ತನಿಖೆ ಮಾಡುತ್ತೇವೆ ಎಂದರು.

ಮಹಿಳೆ ಮೇಲೆ ಸುಳ್ಳು ಕೇಸ್ ದಾಖಲು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಕಲಿ ಪ್ರಕರಣ ದಾಖಲಿಸಿ ಬಂಧನ ಮಾಡಿರುವುದು ಗೊತ್ತಾಗಿದೆ. ಈಗಾಗಲೇ ವರದಿ ಸಿದ್ದಪಡಿಸಲಾಗಿದೆ. ಈ ಸಂಬಂಧ ಕಾನೂನು ಕ್ರಮ ಆಗುತ್ತದೆ. ಯಾವ ಅಧಿಕಾರಿ ಇದ್ದರೋ ಅವರ ವಿರುದ್ಧ ಕ್ರಮ ಅಗುತ್ತದೆ ಎಂದರು.

ಸರ್ಕಾರವೇ ಸ್ಯಾಂಟ್ರೋ ರವಿಯನ್ನು ಬಚ್ಚಿಟ್ಟಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡುತ್ತಿರುವ ಆರೋಪ ಬಗ್ಗೆ ಕೇಳಿದಾಗ, ಕುಮಾರಸ್ವಾಮಿ ಮಾತಿಗೆ ನಾನು ಏನೂ ಹೇಳಲ್ಲ. ಪೊಲೀಸರು ಪ್ರಾಮಾಣಿಕವಾಗಿ‌ ತನಿಖೆ ಮಾಡುತ್ತಿದ್ದಾರೆ. ಅವನನ್ನು ಬಂಧನ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅತಿ ಶೀಘ್ರವೇ ಆತನ ಬಂಧನ ಆಗುತ್ತದೆ ಎಂದರು.

ಇನ್ನು ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಯಾಂಟ್ರೊ ರವಿ ವಿರುದ್ಧ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆತನಿಗೆ ಸೇರಿದ ಆಸ್ತಿ ಜಪ್ತಿಗೂ ಕ್ರಮ ಕೈಗೊಳ್ಳಲಾಗಿದೆ. ಸ್ಯಾಂಟ್ರೋ ರವಿ ಬಗ್ಗೆ ಎಲ್ಲಾ ರೀತಿಯ ತನಿಖೆಗೆ ಆದೇಶಿಸಿದ್ದೇನೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಹಲವು ಪ್ರಕರಣಗಳು​ ದಾಖಲಾಗಿತ್ತು. ಆದರೆ ಇದೆಲ್ಲ ಕಾಂಗ್ರೆಸ್ ಕಾಲದಲ್ಲಿ ನಡೆದಿರುವುದು. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲೇ ಬಿಡುಗಡೆಯಾಗಿದ್ದ. ಸ್ಯಾಂಟ್ರೋ ರವಿದ್ದು 20 ವರ್ಷದ ಇತಿಹಾಸ ಇದೆ. ಯಾವ ಯಾವ ಸರ್ಕಾರ ಇತ್ತು, ಯಾವ ಯಾವ ಮಂತ್ರಿಗಳಿದ್ದರೂ, ಯಾರ ಜೊತೆ ಸಂಬಂಧ ಇತ್ತು ಎಲ್ಲವೂ ತನಿಖೆ ಆಗಲಿದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!