ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಮುಂದುವರಿದ ಚಳಿ, ಶೀತಗಾಳಿ: ಬಾಗಲಕೋಟೆಯಲ್ಲಿ 5.60 ಡಿಗ್ರಿ ಸೆಲ್ಸಿಯಸ್ ದಾಖಲು

ಕಳೆದ ಮೂರ್ನಾಲ್ಕು ದಿನಗಳಿಂದ ಮೈ ಕೊರೆಯುವ ಚಳಿ, ದೇಹವಿಡೀ ಗಡಗಡ ನಡುಗುವ ಸ್ಥಿತಿ. ರಾಜ್ಯದ ಬಹುತೇಕ ಕಡೆ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕೆಳಗೆ ಇಳಿದಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಶೀತ ಗಾಳಿ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಮೈ ಕೊರೆಯುವ ಚಳಿ, ದೇಹವಿಡೀ ಗಡಗಡ ನಡುಗುವ ಸ್ಥಿತಿ. ರಾಜ್ಯದ ಬಹುತೇಕ ಕಡೆ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕೆಳಗೆ ಇಳಿದಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಶೀತ ಗಾಳಿ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ನಿನ್ನೆ ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನ 5.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. (ಇಲ್ಲಿ 9 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾದರೆ ಸಾಮಾನ್ಯಕ್ಕಿಂತ ಕಡಿಮೆ), ವಿಜಯಪುರದಲ್ಲಿ 7 ಡಿಗ್ರಿ ಸೆಲ್ಸಿಯಸ್ (ಸಾಮಾನ್ಯ 9.1 ಡಿಗ್ರಿ ಸೆಲ್ಸಿಯಸ್) ದಾಖಲಾಗಿದ್ದರೆ, ಬೀದರ್‌ನಲ್ಲಿ 7.5 ಡಿಗ್ರಿ ಸೆಲ್ಸಿಯಸ್ (ಸಾಮಾನ್ಯ 8.2 ಡಿಗ್ರಿ ಸೆಲ್ಸಿಯಸ್). ಬಳ್ಳಾರಿಯಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಮತ್ತು ಮಂಡ್ಯದಲ್ಲಿ 9.9 ಡಿಗ್ರಿ ಸೆಲ್ಸಿಯಸ್ ಇತ್ತು. ಧಾರವಾಡ ಜಿಲ್ಲೆಯ ಶಿರಗುಪ್ಪಿಯಲ್ಲಿ ಕನಿಷ್ಠ ತಾಪಮಾನ 5.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಪ್ರಕಾರ, ಕರ್ನಾಟಕದ 194 ಕೇಂದ್ರಗಳಲ್ಲಿ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನ ದಾಖಲಾಗಿದೆ, ಇದರಲ್ಲಿ ಬೆಂಗಳೂರಿನ ಐದು ಸ್ಥಳಗಳು- ಉತ್ತರಹಳ್ಳಿ (9.4), ಸೂಲಿಬೆಲೆ (8), ದೊಡ್ಡಬಳ್ಳಾಪುರದ ಕನಸವಾಡಿ (9), ಮತ್ತು ತೂಬಗೆರೆ (9.8) ಉತ್ತರ ಕರ್ನಾಟಕದ ಒಳನಾಡು ಬೀದರ್, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಶೀತ ಅಲೆಯ ವಾತಾವರಣವಿತ್ತು. ಬೆಂಗಳೂರು ನಗರವು ಶುಷ್ಕ ವಾತಾವರಣವನ್ನು ಅನುಭವಿಸಿದರೆ, ಕನಿಷ್ಠ ತಾಪಮಾನವು 14.3 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ತಾಪಮಾನ 13.8 ಡಿಗ್ರಿ ಸೆಲ್ಸಿಯಸ್ ಇತ್ತು. “ಕಳೆದ ಎರಡು ವರ್ಷಗಳಲ್ಲಿ, ಬೆಂಗಳೂರು ನಗರದಲ್ಲಿ ಇಷ್ಟೊಂದು ಚಳಿಯಿರಲಿಲ್ಲ, ತಾಪಮಾನವು 8-9 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ. ಇದಕ್ಕೆ ಹೆಚ್ಚುತ್ತಿರುವ ಕಾಂಕ್ರಿಟೀಕರಣ ಕಾರಣವಾಗಿದೆ. ಬೆಂಗಳೂರಿನಲ್ಲಿ 1884ರಲ್ಲಿ ಕನಿಷ್ಠ 7.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕನಿಷ್ಠ ಎರಡು ದಿನಗಳ ಕಾಲ ಎರಡಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 6-7 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿದಿರುವುದರಿಂದ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಹಿರಿಯ ಐಎಂಡಿ ಅಧಿಕಾರಿಯೊಬ್ಬರು TNIEಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT