ಸ್ಯಾಂಟ್ರೋ ರವಿ 
ರಾಜ್ಯ

'ಸ್ಯಾಂಟ್ರೋ ರವಿ' ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ: ಎಡಿಜಿಪಿ

ಅತ್ಯಾಚಾರ ಮತ್ತಿತರ ಆರೋಪ ಎದುರಿಸುತ್ತಿರುವ 'ಸ್ಯಾಂಟ್ರೋ' ರವಿ ಬಂಧನಕ್ಕೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಮೈಸೂರು: ಅತ್ಯಾಚಾರ ಮತ್ತಿತರ ಆರೋಪ ಎದುರಿಸುತ್ತಿರುವ 'ಸ್ಯಾಂಟ್ರೋ' ರವಿ ಬಂಧನಕ್ಕೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಪ್ರಕರಣದ ದೂರುದಾರರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಯಾವುದೇ ಒತ್ತಡವಿಲ್ಲ.  ವಿಜಯನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಶೀಘ್ರದಲ್ಲೇ ಸ್ಯಾಂಟ್ರೋ ರವಿ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ರವಿ ತಲೆಮರೆಸಿಕೊಂಡು ಎಂಟು ದಿನಗಳು ಕಳೆದಿವೆ. ಆತನ ಬಂಧನಕ್ಕೆ ತಂಡಗಳನ್ನು ರಚನೆ ಮಾಡಲಾಗಿದೆ. ಮೈಸೂರು, ಮಂಡ್ಯ, ರಾಮನಗರ ಮತ್ತು ಬೆಂಗಳೂರಿನಲ್ಲಿ ಆತನ ಪತ್ತೆಗೆ ತಂಡಗಳು ಶೋಧ ನಡೆಸುತ್ತಿದ್ದು, ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಆತನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ರವಿ ಬ್ಯಾಂಕ್ ಖಾತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ ಅಂಶಗಳನ್ನು ಸಹ ಪರಿಶೀಲಿಸುತ್ತಿದ್ದೇವೆ, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತೆಯೊಬ್ಬರು ತಮ್ಮ ಬಳಿಯಿದ್ದ ಎಲ್ಲಾ ಸಾಕ್ಷ್ಯಾಧಾರಗಳನ್ನು ಪೊಲೀಸರಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಏತನ್ಮಧ್ಯೆ, ರವಿ ಅಂಡಮಾನ್‌ಗೆ ಪರಾರಿಯಾಗಿರುವ ಶಂಕೆಗಳು ವ್ಯಕ್ತವಾಗಿವೆ ಎಂದು ತನಿಖೆಯ ನಿಕಟ ಮೂಲಗಳು ಮಾಹಿತಿ ನೀಡಿವೆ.

ಆರೋಪಿಯು ತನ್ನ ವಕೀಲರಿಗೆ ಲಭ್ಯವಿದ್ದಾನೆ ಮತ್ತು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾನೆ, ಆದರೆ ಪೊಲೀಸರಿಗೆ ಅವನನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ" ಎಂದು ಸಂತ್ರಸ್ತೆಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಎಡಿಜಿಪಿಯನ್ನು ಭೇಟಿಯಾದ ಸಂತ್ರಸ್ತೆಯೊಬ್ಬರು ತಮ್ಮ ಬಳಿ ಇದ್ದ ಎಲ್ಲ ಸಾಕ್ಷ್ಯಗಳನ್ನು ಪೊಲೀಸರಿಗೆ ತೋರಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT