ಸರ್ಕಾರದ ಆಮಂತ್ರಣ ಪತ್ರ 
ರಾಜ್ಯ

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಆಗಮನ: ಟೀಕೆ ವ್ಯಕ್ತವಾದ ನಂತರ ಸುತ್ತೋಲೆ ಹಿಂತೆಗೆದುಕೊಂಡ ಧಾರವಾಡ ಪಿಯು ಶಿಕ್ಷಣ ಇಲಾಖೆ

ಹುಬ್ಬಳ್ಳಿಯಲ್ಲಿ ನಾಳೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು. 

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಾಳೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು. 

ಪತ್ರ ಮಾಧ್ಯಮಗಳಲ್ಲಿ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕರಿಂದ ತೀವ್ರ ಟೀಕೆ ಬಂದು ಇದೀಗ ಪಿಯು ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹಿಂತೆಗೆದುಕೊಂಡಿದೆ. ಇದು ಕಣ್ತಪ್ಪಿನಿಂದಾಗಿ ಪ್ರಕಟವಾಗಿದ್ದು, ಇಚ್ಛೆಯುಳ್ಳ ವಿದ್ಯಾರ್ಥಿಗಳು ನಾಳೆ ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಸಮಜಾಯಿಷಿ ನೀಡಿದೆ. 

ಬೆಂಗಳೂರಿನಲ್ಲಿ ಕಳೆದ ನವೆಂಬರ್ ನಲ್ಲಿ ಸಹ ಇದೇ ರೀತಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ನಂತರ ಸಾರ್ವಜನಿಕರಿಂದ ಟೀಕೆ ವ್ಯಕ್ತವಾದ ನಂತರ ಹಿಂತೆಗೆದುಕೊಂಡ ಘಟನೆ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT