ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ ಸಮಸ್ಯೆ 
ರಾಜ್ಯ

ಪಿಲ್ಲರ್ ದುರಂತದ ಬಳಿಕ ಈಗ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ ಸಮಸ್ಯೆ; ಬೈಕ್ ಸವಾರನಿಗೆ ಗಾಯ

ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಇತ್ತೀಚೆಗೆ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ (ರಸ್ತೆ ಕುಳಿ) ಸಮಸ್ಯೆ ಎದುರಾಗಿದೆ. 

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಇತ್ತೀಚೆಗೆ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ (ರಸ್ತೆ ಕುಳಿ) ಸಮಸ್ಯೆ ಎದುರಾಗಿದೆ. 

ಮೆಟ್ರೋ ಹತ್ತಿರವೇ ಇರುವ ಬ್ರಿಗೇಡ್ ರಸ್ತೆಯಲ್ಲಿ ಏಕಾ ಏಕಿ ಸಿಂಕ್ ಹೋಲ್ ಸಮಸ್ಯೆ ಕಾಣಿಸಿಕೊಂಡಿದ್ದು, ಓರ್ವ ದ್ವಿಚಕ್ರ ವಾಹನ ಸವಾರ ಸಿಂಕ್ ಹೋಲ್ ಒಳಗೆ ಬಿದ್ದು ಗಾಯಗೊಂಡಿದ್ದಾರೆ.

 
ಈ ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ಪೊಲೀಸರು ಇನ್ನಷ್ಟೇ ತನಿಖೆ ನಡೆಸಬೇಕಿದೆ. ಗಾಯಗೊಂಡ ವ್ಯಕ್ತಿಯನ್ನು ಫೋರ್ಟಿಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು.

ಇದನ್ನೂ ಓದಿ: ತ್ವರಿತಗತಿ ಕಾಮಗಾರಿಯಿಂದ ಅಪಘಾತ ಸಂಭವಿಸಿಲ್ಲ: ಬಿಎಂಆರ್‌ಸಿಎಲ್ ಸ್ಪಷ್ಟನೆ
 
ವರದಿಗಳ ಪ್ರಕಾರ, ಬೈಕರ್ ನ್ನು ಪುನೀತ್ ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 12:15 ರ ವೇಳೆಗೆ ಬ್ರಿಗೇಡ್ ಟವರ್ಸ್ ನ ಬಳಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳ ಬಿಬಿಎಂಪಿ ಕೇಂದ್ರ ಕಚೇರಿಗೆ ಒಂದು ಕಿ.ಮೀ ದೂರದಲ್ಲಿ ನಡೆದಿದೆ.

ರಸ್ತೆ ಕುಳಿಗೆ ಬಿದ್ದು ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆ ಬಳಿಕ ಆತನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬೆನ್ನಲ್ಲೇ ಆ ಪ್ರದೇಶದಲ್ಲಿ ಸಂಚಾರ ದಟ್ಟಣೆ ಹೆಚ್ಚಾಯಿತು, ಆದರೆ ನಾವು ತಕ್ಷಣವೇ ಸಂಚಾರ ಮಾರ್ಗವನ್ನು ಬದಲಾಯಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!