ಆರಗ ಜ್ಞಾನೇಂದ್ರ 
ರಾಜ್ಯ

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮನೆ ಮುಂದೆಯೇ ಪೊಲೀಸ್ ಪೇದೆ ಆತ್ಮಹತ್ಯೆ ಯತ್ನ!

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಪೇದೆ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡು ಸಾಯಲು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯ ಮುಂದೆ ಪೊಲೀಸ್​ ಪೇದೆಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಪೇದೆ ಚಾಕುವಿನಿಂದ ತನ್ನ ಕೈ ಕೊಯ್ದುಕೊಂಡು ಸಾಯಲು ಯತ್ನಿಸಿದ್ದರು ಎಂದು ತಿಳಿದು ಬಂದಿದೆ.

ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಹೆಗಡೆ ನಗರದ ನಿವಾಸಿ ನವೀನ್‌ ಕುಮಾರ್‌ (25) ಆತ್ಮಹತ್ಯೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. ಜಯಮಹಲ್‌ ರಸ್ತೆಯಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧಿಕೃತ ಸರ್ಕಾರಿ ನಿವಾಸದ ಭದ್ರತಾ ಕರ್ತವ್ಯದಲ್ಲಿ ಮಂಗಳವಾರ ನವೀನ್‌ ನಿರತನಾಗಿದ್ದಾಗ ಈ ಘಟನೆ ನಡೆದಿದೆ.

ಸಚಿವರ ಮನೆ ಮುಂದೆ ಬೆಳಗ್ಗೆ 9.45ರ ಸುಮಾರಿಗೆ ಎಡಗೈ ಕುಯ್ದುಕೊಂಡು ನಿತ್ರಾಣನಾಗಿ ನವೀನ್‌ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಅಲ್ಲೇ ಭದ್ರತೆಯಲ್ಲಿ ಪೊಲೀಸರು ದಾಖಲಿಸಿದರು. ವೈದ್ಯಕೀಯ ಚಿಕಿತ್ಸೆಗೆ ಕಾನ್‌ಸ್ಟೇಬಲ್‌ ಸ್ಪಂದಿಸುತ್ತಿದ್ದು, ಆತ ಪ್ರಾಣಪಾಯದಿಂದ ಸುರಕ್ಷಿತವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಗೃಹ ಸಚಿವರ ಭಧ್ರತೆಗಾಗಿ ಪೊಲೀಸ್​ ಪೇದೆ ನವೀನ್​ ಅವರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆಯೇ ಇವರು ಆತ್ಮಹತ್ಯೆಗೆ ಯತ್ನಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!

"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ